ವಿಶ್ವದ ಜನಪ್ರಿಯ ನಾಯಕರಲ್ಲಿ ಪ್ರಧಾನಿ ಮೋದಿಯೇ ನಂ.1 ಸ್ಥಾನ

ನವದೆಹಲಿ: ಮಾರ್ನಿಂಗ್ ಕನ್ಸಲ್ಟ್  ರಾಜಕೀಯ ಗುಪ್ತಚರ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಹೆಚ್ಚು ಪ್ರಸಿದ್ಧಿ ಪಡೆದಿರುವ ಜಗತ್ತಿನ ಜನಪ್ರಿಯ ನಾಯಕರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೇ ನಂಬರ್ ಸ್ಥಾನದಲ್ಲಿದ್ದಾರೆ. 

ಸರ್ವೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶೇ. 71 ರಷ್ಟು ರೇಟಿಂಗ್ ಪಡೆದಿದ್ದು, ಶೇ. 21 ಮಂದಿ ಅವರ ವಿರುದ್ಧ ಪ್ರತಿಕ್ರಿಯಿಸಿದ್ದಾರೆ. ಶೇ. 50 ರಷ್ಟು ನಿವ್ವಳ ಅನುಮೋದನೆಯನ್ನು ಪ್ರಧಾನಿ ಹೊಂದಿದ್ದಾರೆ. ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅತ್ಯಂತ ಕಡಿಮೆ ರೇಟಿಂಗ್ ಪಡೆದುಕೊಂಡಿದ್ದಾರೆ. 

ಮೆಕ್ಸಿಕೋ ಅಧ್ಯಕ್ಷ ಅಂಡ್ರೆಸ್ ಮ್ಯಾನುಯೆಲ್ ಲೊಪೆಜ್ ಓಬ್ರಾಡಾರ್  ಶೇ. 66 ಅನುಮೋದನೆ ರೇಟಿಂಗ್ ನೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ. ಇಟಲಿ ಪ್ರಧಾನ ಮಂತ್ರಿ ಮಾರಿಯೊ ಡ್ರಾಘಿ ಶೇ. 60 ರಷ್ಟು ಅನುಮೋದಿತ ರೇಟಿಂಗ್ ನೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. 13 ವಿಶ್ವ ನಾಯಕರ ಪಟ್ಟಿಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಶೇ 43 ರೇಟಿಂಗ್ ನೊಂದಿಗೆ ಆರನೇ ಸ್ಥಾನ ಪಡೆದಿದ್ದಾರೆ. ಕೆನಡಾ ಅಧ್ಯಕ್ಷ ಜಸ್ಟಿನ್ ಟ್ರುಡೊ 7 ಮತ್ತು ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಶೇ. 41 ರಷ್ಟು ರೇಟಿಂಗ್ ನೊಂದಿಗೆ ಏಳನೇ ಸ್ಥಾನದಲ್ಲಿದ್ದಾರೆ. 

ಮಾರ್ನಿಂಗ್ ಕನ್ಸಲ್ಟ್ ಪ್ರಸ್ತುತ ವಿಶ್ವದಾದ್ಯಂತ ವಿವಿಧ ದೇಶಗಳ ನಾಯಕರ ಅನುಮೋದನೆ ರೇಟಿಂಗ್ ಗಳನ್ನು ಟ್ರ್ಯಾಕ್ ಮಾಡುತ್ತದೆ. ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಫ್ರಾನ್ಸ್, ಜರ್ಮನಿ, ಭಾರತ, ಇಟಲಿ, ಜಪಾನ್, ಮೆಕ್ಸಿಕೋ, ದಕ್ಷಿಣ ಕೊರಿಯಾ, ಸ್ಪೇನ್, ಬ್ರಿಟನ್ ಹಾಗೂ ಅಮೆರಿಕಾ ನಾಯಕರ ಅನುಮೋದನೆ ರೇಟಿಂಗ್ ಗಳನ್ನು ಟ್ರ್ಯಾಕ್ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!