ಮುಂಬೈ ಭೀಕರ ಕಾರು ಅಪಘಾತ- ಬಿಜೆಪಿ ಶಾಸಕನ ಪುತ್ರ ಸೇರಿದಂತೆ 7 ವೈದ್ಯಕೀಯ ವಿದ್ಯಾರ್ಥಿಗಳ ದುರ್ಮರಣ

ಮುಂಬೈ ಜ.25: ಮಹಾರಾಷ್ಟ್ರದ ಸೆಲ್ಸೂರ ಬಳಿಯ ಬ್ರಿಡ್ಜ್ ನಲ್ಲಿ ನಿನ್ನೆ ರಾತ್ರಿ ನಡೆದ ಭೀಕರ ಕಾರು ಅಪಘಾತದಲ್ಲಿ ಬಿಜೆಪಿ ಶಾಸಕನ ಪುತ್ರ ಸೇರಿದಂತೆ 7 ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.

ಗೊಂಡಿಯಾ ಜಿಲ್ಲೆಯ ತಿರೋರಾ ಕ್ಷೇತ್ರದ ಶಾಸಕ ವಿಜಯ್ ರಹಾಂಗದಲೆ ಅವರ ಪುತ್ರ ಆವಿಷ್ಕಾರ್ . ನೀರಜ್ ಚೌಹಾಣ್, ನಿತೇಶ್ ಸಿಂಗ್  , ವಿವೇಕ್ ನಂದನ್ , ಪ್ರತ್ಯುಷ್ ಸಿಂಗ್ , ಶುಭಂ ಜೈಸ್ವಾಲ್  ಮತ್ತು ಪವನ್ ಶಕ್ತಿ ಮೃತವಿದ್ಯಾರ್ಥಿಗಳು. ಇವರು ಸಾವಂಗಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ ಆವಿಷ್ಕಾರ್ ಮತ್ತು ಆತನ ಸ್ನೇಹಿತರು ಡಿಯೋಲಿಯಿಂದ ವಾರ್ಧಾಗೆ ತೆರಳುತ್ತಿದ್ದರು.

ಈ ವೇಳೆ ಮಹಾರಾಷ್ಟ್ರದ ಸೆಲ್ಸೂರ ಬಳಿ ಬ್ರಿಡ್ಜ್ ನಲ್ಲಿಇವರ ಕಾರಿಗೆ ಕಾಡು ಪ್ರಾಣಿ ಅಡ್ಡ ಬಂದಿದ್ದು, ಪ್ರಾಣಿಗೆ ಕಾರು ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ‌ ಕಾರು ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ಕಾರು ಬ್ರಿಡ್ಜ್ ನಿಂದ 40 ಅಡಿ ಆಳದ ಕಮರಿಗೆ ಬಿದ್ದು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ವಿದ್ಯಾರ್ಥಿಗಳು ಪರೀಕ್ಷೆ ಬರೆದು, ಪಾರ್ಟಿ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ತಡರಾತ್ರಿ ದುರ್ಘಟನೆ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ರಶಾಂತ್ ಹೋಳ್ಕರ್ ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!