ಕಾರ್ಕಳ: ಪತ್ರಕರ್ತರು ಹಾಗೂ ಕುಟುಂಬದ ಸದಸ್ಯರಿಗೆ ಕನ್ನಡಕ ವಿತರಣೆ

ಕಾರ್ಕಳ: ತಾಲೂಕಿನ ಪತ್ರಕರ್ತರು ಹಾಗೂ ಕುಟುಂಬದ ಸದಸ್ಯರಿಗೆ ಕನ್ನಡಕ ವಿತರಣೆ ಕಾರ್ಯಕ್ರಮವು ಕಾರ್ಕಳ ಪ್ರವಾಸಿ ಮಂದಿರದಲ್ಲಿ ಕಾರ್ಕಳ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಶರೀಫ್ ರವರ ಅಧ್ಯಕ್ಷತೆಯಲ್ಲಿ ಜರುಗಿತು.

ಕಾರ್ಕಳ ಕೆ ಇ ಎಂ ಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆ.ಎಸ್ ಇಮ್ತಿಯಾಜ್ ಅಹ್ಮದ್ ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಕನ್ನಡಕ ವಿತರಿಸಿ ಶುಭಾಶಂಸನೆಗೈದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷ ಆರ್ ಬಿ ಜಗದೀಶ್, ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಕ್ರಷ್ಣ ನಾಯ್ಕ, ಕೋಶಾಧಿಕಾರಿ ಬಾಲಕೃಷ್ಣ ಭೀಮಗುಳಿ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

error: Content is protected !!