ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಲಾಲಾಜಿ ಮೆಂಡನ್ ಆಯ್ಕೆ

ಉಡುಪಿ (ಉಡುಪಿ ಟೈಮ್ಸ್ ವರದಿ) : ಕರ್ನಾಟಕ ರಾಜ್ಯ ಸರಕಾರವು ವಿವಿಧ ಶಾಸಕರುಗಳಿಗೆ  ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಆಯ್ಕೆಯಾಗಿದ್ದಾರೆ.


ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಒಂದು ವರ್ಷ ಪೂರೈಸಿದ್ದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 24 ಶಾಸಕರುಗಳಿಗೆ ನಿಗಮ/ಮಂಡಳಿಗಳ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.


ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಮೂರು ಬಾರಿ ಶಾಸಕರಾಗಿರುವ, ಲಾಲಾಜಿ ಆರ್. ಮೆಂಡನ್ ಸರಳ ಸ್ವಭಾವದವರಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪನವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!