ಅಧಿಕಾರಕ್ಕಾಗಿ ಸಿದ್ದ ರಹೀಮ್ ಅಯ್ಯ ಎಂದು ಹೆಸರು ಬದಲಾಯಿಸಿಕೊಳ್ಳುತ್ತಾರೆ: ಹಿಜಾಬ್-ಟೋಪಿ ಹಾಕಿಕೊಂಡು ಮದರಸಾಗೆ ಹೋಗಿ: ಪ್ರತಾಪ್ ಸಿಂಹ

ಮೈಸೂರು: ಸಮವಸ್ತ್ರ ಎನ್ನುವುದು ಬರೀ ಬಣ್ಣದ ಉಡುಪಲ್ಲ.  ಅದು ಎಲ್ಲಾ ಮಕ್ಕಳು ಸಮಾನರು ಎಂದು ಸಾರುವ ಸಂಕೆೇತ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಹಿಜಾಬ್ ಸಂಘರ್ಷ ಕುರಿತಂತೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಪ್ರತಾಪ್ ಸಿಂಹ,  ಹಿಜಾಬ್ ಗಾಗಿ ಇಷ್ಟು ಹಠ ಹಿಡಿದು ಯಾಕಾಗಿ ವಿದ್ಯಾರ್ಥಿಗಳು ಕೂತಿದ್ದಾರೆ. ಸಮವಸ್ತ್ರ ಎನ್ನುವುದು ಬರೀ ಬಣ್ಣದ ಉಡುಪಲ್ಲ. ಅದು ಎಲ್ಲಾ ಮಕ್ಕಳು ಸಮಾನರು ಎಂದು ಸಾರುವ ಉಡುಪು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರೂ ಕಾಲೇಜಿಗೆ ‘ಜಾಬ್’ ಗಾಗಿ ಬರುತ್ತಾರೆ, ಆದರೆ ನೀವು ‘ಹಿಜಾಬ್’ ಗಾಗಿ ಬರುತ್ತೀದ್ದೀರಾ? ಹಿಜಾಬ್ ಹಾಕಿಕೊಂಡು, ಟೋಪಿ ಹಾಕಿಕೊಂಡು ನೀವು ಕಲಿಯಬೇಕು ಎಂಬುದಾದರೆ ಮದರಸಗೆ ಹೋಗಿ. ಮದರಸದಲ್ಲಿ ನಿಮ್ಮ ಪ್ರತ್ಯೇಕ ಭಾವನೆ ಕಾಪಾಡಿಕೊಳ್ಳಬಹುದು. ಆದರೆ ಸರ್ಕಾರಿ ಶಾಲೆಗಳಲ್ಲಿ ಈ ಪ್ರತ್ಯೇಕತೆ ಸಾಧ್ಯವಿಲ್ಲ. ಇದು ಬ್ರಿಟಿಷರ ಭಾರತವಲ್ಲ, ಇದು ಭರತ ಖಂಡ ಎಂದರು.

ಹಿಂದೂ ಧರ್ಮದ ಬುನಾದಿ ಮೇಲಿರುವ ದೇಶವಿದು. ಇಲ್ಲಿ ಗಣಪತಿ ಪೂಜೆ, ಹೆಣ್ಣು ಮಕ್ಕಳ ಕುಂಕುಮ‌ ಸಂಸ್ಕೃತಿಯ ಭಾಗ. ಇದನ್ನು ಯಾರು ಪ್ರಶ್ನಿಸುವಂತಿಲ್ಲ. ಇಸ್ಲಾಂ- ಕ್ರಿಶ್ಚಿಯನ್ ಮರುಭೂಮಿಯಲ್ಲಿ ಹುಟ್ಟಿ ನೆಲೆಗಾಗಿ ಹುಡುಕಿ ಕೊಂಡು ಇಲ್ಲಿಗೆ ಬಂದಿವೆ. ಇಲ್ಲಿಗೆ ಬಂದ ಮೇಲೆ ಹಿಂದೂ ಸಂಸ್ಕೃತಿಯನ್ನು ಒಪ್ಪಿಕೊಳ್ಳಬೇಕು. ಕ್ರಿಶ್ಚಿಯನ್, ಇಸ್ಲಾಂ ಧರ್ಮದ ಹೇರಿಕೆ ಇಲ್ಲಿ ನಡೆಯುವುದಿಲ್ಲ. ಈ ನೆಲದ ಸಂಸ್ಕೃತಿಯನ್ನು ಕ್ರಿಶ್ಚಿಯನ್, ಇಸ್ಲಾಂ ಧರ್ಮಗಳು ಒಪ್ಪಿ ಕೊಳ್ಳಬೇಕು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. ಕ್ರಿಶ್ಚಿಯನ್, ಇಸ್ಲಾಂ ಧರ್ಮದ ಹೇರಿಕೆ ಇಲ್ಲಿ ನಡೆಯುವುದಿಲ್ಲ. ಈ ನೆಲದ ಸಂಸ್ಕೃತಿಯನ್ನು ಕ್ರಿಶ್ಚಿಯನ್, ಇಸ್ಲಾಂ ಧರ್ಮಗಳು ಒಪ್ಪಿಕೊಳ್ಳಬೇಕು ಎಂದು ಹೇಳಿದರು.

ಹಿಜಾಬ್ ಬಗ್ಗೆ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರತಾಪ್ ಸಿಂಹ, ಅವರನ್ನು ಗಂಭೀರವಾಗಿ ಪರಿಗಣಿಸಬೇಡಿ. ಗೋರಿಪಾಳ್ಯದ ಜಮೀರ್ ಅಹಮದ್ ಈಗ ಸಿದ್ದರಾಮಯ್ಯ ಅವರನ್ನು ಚಾಮರಾಜಪೇಟೆಯಿಂದ ಸ್ಪರ್ಧಿಸಲು ಕರೆಯುತ್ತಿದ್ದಾರೆ. ಅಧಿಕಾರಕ್ಕಾಗಿ ಸಿದ್ದರಾಮಯ್ಯ ಅವರು ಸಿದ್ದರಹೀಮ್ ಅಯ್ಯ ಅಂತಾ ಬೇಕಾದರೂ ಹೆಸರು ಬದಲಾಯಿಸಿಕೊಳ್ಳುತ್ತಾರೆ. ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಬೇಡಿ ಎಂದು ವ್ಯಂಗ್ಯ ಮಾಡಿದರು.

Leave a Reply

Your email address will not be published. Required fields are marked *

error: Content is protected !!