ರಾಜ್ಯದಲ್ಲಿ 1 ಲಕ್ಷ ದಾಟಿದ ಕೊರೋನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಆರ್ಭಟ ಮುಂದುವರಿದಿದೆ. ಕಳೆದ ಐದು ದಿನಗಳಿಂದ ದಿನವೊಂದರಲ್ಲಿ ಐದು ಸಾವಿರಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1 ಲಕ್ಷದ ಗಡಿ ದಾಟಿದೆ.

ಸೋಮವಾರ ರಾಜ್ಯದಲ್ಲಿ ಒಟ್ಟು 5324 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,01,465ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಮಹಾಮಾರಿಗೆ ಇಂದು 75 ಮಂದಿ ಬಲಿಯಾಗಿದ್ಧಾರೆ. ಈ ಮೂಲಕ ಇದುವರೆಗೂ ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 1953ಕ್ಕೆ ಏರಿಕೆಯಾಗಿದೆ.

ಇಂದು ರಾಜಧಾನಿ ಬೆಂಗಳೂರು ನಗರದಲ್ಲಿ 1470 ಪ್ರಕರಣಗಳು ಪತ್ತೆಯಾಗಿದ್ದು, 26 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ.

ಈ ನಡುವೆ, ಕಳೆದ 24 ಗಂಟೆಗಳಲ್ಲಿ 1847 ಮಂದಿ ಸಂಪೂರ್ಣ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಒಟ್ಟು 37685 ಮಂದಿ ಚೇತರಿಸಿಕೊಂಡಂತಾಗಿದೆ. ಸದ್ಯ ರಾಜ್ಯದಲ್ಲಿ ಒಟ್ಟು 61,819 ಸಕ್ರಿಯ ಪ್ರಕರಣಗಳಿದ್ದು, 598 ಮಂದಿಯ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Leave a Reply

Your email address will not be published. Required fields are marked *

error: Content is protected !!