ಕೆ. ಕೃಷ್ಣಮೂರ್ತಿ ಆಚಾರ್ಯ ಅಭಿಮಾನಿ ಬಳಗ: ಮಲ್ಪೆಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ
ಮಲ್ಪೆ ಫೆ.9 (ಉಡುಪಿ ಟೈಮ್ಸ್ ವರದಿ): ಕೆ.ಕೃಷ್ಣಮೂರ್ತಿ ಆಚಾರ್ಯ ಅಭಿಮಾನಿ ಬಳಗ ಮಲ್ಪೆ ಹಾಗೂ ಮಲ್ಪೆ ಬಂದರು ಇಲಾಖಾ ವ್ಯಾಪ್ತಿಯ ಅಂಗಡಿ ವ್ಯಾಪಾರಸ್ಥರ ಸಂಘ ಮಲ್ಪೆ ಇದರ ವತಿಯಿಂದ ಪ್ರಸಾದ್ ನೇತ್ರಾಲಯ ಸುಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಅಂಧತ್ವ ವಿಭಾಗ ಉಡುಪಿ, ಡಾ.ಪಿ.ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಇದರ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಚಿಕಿತ್ಸಾ ಶಿಬಿರ ಮಲ್ಪೆಯ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆಯಿತು.
ಕಾರ್ಯವನ್ನು ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ನಾಡೋಜ ಡಾ. ಕೃಷ್ಣಪ್ರಸಾದ್ ಕೂಡ್ಡು ಉದ್ಘಾಟಿಸಿದರು. ಸಮಾಜ ಸೇವಕ ಕೆ. ಕೃಷ್ಣಮೂರ್ತಿ ಆಚಾರ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಮಲ್ಪೆ ಪೊಲೀಸ್ ಠಾಣೆಯ ಠಾಣಾಧಿಕಾರಿ ಶಕ್ತಿವೇಲು, ಕೃಷ್ಣಮೂರ್ತಿ ಆಚಾರ್ಯ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ಚರಣ್ ರಾಜ್ ಬಂಗೇರ, ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೃಷ್ಣಪ್ಪ ಜತ್ತನ್, ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ರಘುರಾಮ್ ಸುವರ್ಣ, ಬಂದರು ವ್ಯಾಪ್ತಿಯ ಅಂಗಡಿ ಮಾಲಕರ ಸಂಘದ ಅಧ್ಯಕ್ಷ ಕೇಶವ, ಉಪಾಧ್ಯಕ್ಷ ಬಾಲಕೃಷ್ಣ ಮೆಂಡನ್, ಕಾರ್ಯದರ್ಶಿ ಮಹೇಶ್ ಸುವರ್ಣ, ಮಾಜಿ ನಗರಸಭಾ ಅಧ್ಯಕ್ಷ ಯುವರಾಜ್, ಮಲ್ಪೆ ಉದ್ಯಮಿ ದಿನೇಶ್ ಸುವರ್ಣ, ಅಂಬೇಡ್ಕರ್ ಯುವಸೇನೆಯ ತಾಲೂಕು ಅಧ್ಯಕ್ಷ ದಯಾನಂದ ಕಪ್ಪೆಟ್ಟು ಉಪಸ್ಥಿತರಿದ್ದರು.