ಹಿಜಾಬ್ ವಿವಾದ: ಬೆಂಗಳೂರು ಶಾಲಾ ಕಾಲೇಜುಗಳ ಸುತ್ತ ಫೆ.22 ರವರೆಗೆ ನಿಷೇಧಾಜ್ಞೆ

ಬೆಂಗಳೂರು: ಹಿಜಾಬ್-ಕೇಸರಿ ಶಾಲು ವಿವಾದ ಉಲ್ಬಣಗೊಂಡ ಹಿನ್ನೆಲೆ ಬೆಂಗಳೂರಿನ ನಗರದ ಶಾಲಾ-ಕಾಲೇಜುಗಳ ಸುತ್ತ ಯಾವುದೇ ರೀತಿಯ ಗುಂಪು ಅಥವಾ ಆಂದೋಲನವನ್ನು ನಿರ್ಬಂಧಿಸಲು ನಿಷೇಧಾಜ್ಞೆ ವಿಧಿಸಲಾಗಿದೆ.

ಶಿಕ್ಷಣ ಸಂಸ್ಥೆಗಳಿಂದ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಯಾವುದೇ ರೀತಿಯ ಸಭೆ ಅಥವಾ ಪ್ರತಿಭಟನೆ ನಡೆಸುವಂತಿಲ್ಲ ಎಂದು ಬೆಂಗಳೂರಿನ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ. ಬುಧವಾರ ಬೆಂಗಳೂರಿನ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದು, ನಗರದಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳುವುದು ಅತ್ಯಗತ್ಯ.

ಬೆಂಗಳೂರು ನಗರದಲ್ಲಿರುವ ಶಾಲೆಗಳು, ಪಿಯು ಕಾಲೇಜುಗಳು, ಪದವಿ ಕಾಲೇಜುಗಳು ಅಥವಾ ಇತರ ರೀತಿಯ ಶಿಕ್ಷಣ ಸಂಸ್ಥೆಗಳ ಸುತ್ತಲೂ ಕ್ರಿಮಿನಲ್ ಪ್ರೊಸೀಜರ್ ಕೋಡ್ (ಸಿಆರ್ ಪಿಸಿ) ಸೆಕ್ಷನ್ 144 ಅನ್ನು ವಿಧಿಸಲಾಗುತ್ತದೆ. ಫೆಬ್ರವರಿ 9 ರಿಂದ ಫೆಬ್ರವರಿ 22 ರವರೆಗೆ ಎರಡು ವಾರಗಳವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.

ಏತನ್ಮಧ್ಯೆ, ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಏಕ ಪೀಠವು ಕಾಲೇಜುಗಳಲ್ಲಿ ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.

Leave a Reply

Your email address will not be published. Required fields are marked *

error: Content is protected !!