ಫೆ.11-13 – ಉದ್ಯಾವರದಲ್ಲಿ ನಿರಂತರ್ ನಾಟಕೋತ್ಸವ 

ಉಡುಪಿ (ಉಡುಪಿ ಟೈಮ್ಸ್ ವರದಿ): ಕಲೆ, ಸಾಹಿತ್ಯ ಮತ್ತು ಕಲಾವಿದರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಆರಂಭವಾಗಿರುವ ನಿರಂತರ್ ಉದ್ಯಾವರ ಸಂಸ್ಥೆಯ 4ನೇ ವರ್ಷದ 3 ದಿನಗಳ ‘ನಿರಂತರ್ ನಾಟಕೋತ್ಸವ’ ಇದೇ ಫೆಬ್ರವರಿ 11 ರಿಂದ 13 ರವರೆಗೆ ಉದ್ಯಾವರ ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ವಠಾರದ ಐಸಿವೈಎಂ ಉದ್ಯಾವರ ಸುವರ್ಣಮಹೋತ್ಸವ ರಂಗಮಂದಿರದಲ್ಲಿ ನಡೆಯಲಿದೆ ಎಂದು ಸಂಘಟನೆಯ ಪ್ರಕಟನೆ ತಿಳಿಸಿದೆ.

ಫೆ. 11ರಂದು ಸಂಜೆ 6.15ಕ್ಕೆ ಉಡುಪಿ ಧರ್ಮಪ್ರಾಂತ್ಯದ ಕುಲಪತಿ ಮತ್ತು ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ಪ್ರಧಾನ ಧರ್ಮಗುರುಗಳಾದ ಅ.ವಂ.ಸ್ಟ್ಯಾನಿ ಬಿ. ಲೋಬೋರವರು ನಾಟಕೋತ್ಸವಕ್ಕೆ ಚಾಲನೆ ನೀಡಲಿದ್ದು, ದೇವಾಲಯದ ಪಾಲನಾ ಮಂಡಳಿಯ ಉಪಾಧ್ಯಕ್ಷ ರಾದ ಮೆಲ್ವಿನ್ ನೊರೊನ್ಹಾ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಅಧ್ಯಕ್ಷರಾದ ಲ. ಗೋಡ್ ಫ್ರೀ ಡಿಸೋಜ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಉದ್ಘಾಟನ ದಿನದಲ್ಲಿ 2ನಾಟಕ ಪ್ರದರ್ಶನವಾಗಲಿದ್ದು, ಕ್ರಿಸ್ಟಿ ನೀನಾಸಂ ನಿರ್ದೇಶನದ ಅಸ್ತಿತ್ವ ತಂಡದಿಂದ ‘ರಾಯಾಚಿ ನವಿ ಮುಸ್ತಾಯ್ಕಿ’ ಮತ್ತು ವಿಕಾಸ್ ಕಲಾಕುಲ್ ನಿರ್ದೇಶನದ ಮಾಂಡ್ ತಂಡದಿಂದ ‘ಮಜ್ಯಾ ಪುತಾಚೊ ಕಿಣ್ಕುಳೊ’ ಪ್ರದರ್ಶನವಾಗಲಿದೆ.

ದ್ವಿತೀಯ ದಿನ (ಫೆ.12) ಉಡುಪಿ ಧರ್ಮಪ್ರಾಂತ್ಯದ ಐಸಿವೈಎಂ ನಿರ್ದೇಶಕ ಮತ್ತು ಉಡುಪಿ ಚರ್ಚಿನ ಪ್ರಧಾನ ಧರ್ಮಗುರುಗಳಾಗಿರುವ ಅ.ವಂ.ಚಾರ್ಲ್ಸ್ ಮಿನೇಜಸ್, ಕರ್ನಾಟಕ ಪೊಲೀಸ್ ನ ನಿವೃತ್ತ ಎಸ್ ಪಿ ಎಚ್ ಡಿ ಮೆಂಡೋನ್ಸಾ, ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನ ನಿಕಟಪೂರ್ವ ಅಧ್ಯಕ್ಷ ಲ.ಜೋನ್ ಫೆರ್ನಾಂಡಿಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಡೆನಿಸ್ ಮೊಂತೇರ್ ನಿರ್ದೇಶನದ ಅಸ್ತಿತ್ವ ತಂಡದಿಂದ ‘ಹಾಂಡೊ ಉಟ್ಲಾ’ ನಾಟಕ ಪ್ರದರ್ಶನವಾಗಲಿದೆ.

ಕೊನೆಯ ದಿನ (ಫೆ.13) ಮಂಗಳೂರಿನ ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಯ ನಿರ್ದೇಶಕರಾಗಿರುವ ವಂ. ರಿಚ್ಚರ್ಡ್ ಕುವೆಲ್ಲೋ, ಮಂಗಳೂರು ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಯ ಡೀನ್ ಮತ್ತು ಮೆಡಿಕಲ್ ಕಾಲೇಜ್ ಇಲ್ಲಿಯ ಪ್ರೊಫೆಸರ್ ಆಗಿರುವ ಡಾ. ಉರ್ಬನ್ ಡಿಸೋಜ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನ ಸ್ಥಾಪಕ ಅಧ್ಯಕ್ಷರಾಗಿರುವ ಲ. ಹೆನ್ರಿ ಡಿಸೋಜಾ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕ್ರಿಸ್ಟಿ ನೀನಾಸಂ ನಿರ್ದೇಶನದ ಅಸ್ತಿತ್ವ ತಂಡದಿಂದ ‘ಸಂಪದ್ಲೆ’ ನಾಟಕ ಪ್ರದರ್ಶನವಾಗಲಿದೆ ಎಂದು ನಿರಂತರ್ ಪ್ರಕಟನೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!