ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ವರ್ಗಾವಣೆ
ಮಂಗಳೂರು, ಜು 28: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಅದೇಶ ಹೊರಡಿಸಿದ್ದು ಅವರ ಸ್ಥಾನಕ್ಕೆ ಬೆಳಗಾವಿಯ ಜಿಲ್ಲಾ ಪಂಚಾಯತ್ ಸಿ.ಇ ಓ ಆಗಿದ್ದ ಡಾ. ರಾಜೇಂದ್ರ ಕೆ.ವಿ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.
ಸಿಂಧೂ ರೂಪೇಶ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಇ -ಆಡಳಿತ ವಿಭಾಗದ ನಿರ್ದೆಶಕಿಯನ್ನಾಗಿ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.
ನಿನ್ನೆ ಗೋಸಾಗಾಟ ಮಾಡುವ ವ್ಯಾಪಾರಿಗಳಿಗೆ ಹಲ್ಲೆ ಮಾಡುವವರ, ದರೋಡೆ ಮಾಡುವ ಖದೀಮರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಸಿಂಧು ಬಿ. ರೂಪೇಶ್ ಅವರು ಖಡಕ್ ವಾರ್ನಿಂಗ್ ನೀಡಿದ್ದರು. ಇದರ ಬೆನ್ನಲ್ಲೇ ಅವರಿಗೆ ಸಾಮಾಜಿಕ ಜಾಲಾತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಆದರೆ ಈ ಘಟನೆ ನಡೆದ ಬೆನ್ನಲ್ಲೇ ಈಗ ದಿಢೀರ್ ವರ್ಗಾವಣೆ ಆಗಿದೆ.
Good luck to Sindhu B Roopesh, IAS, DC DK (transferred). This transfer seems to be political motivated as per public news, which is giving wrong information to the people. Welcome to Dr Rajendra KV, new DC DK Dist.