ಹಿಜಾಬ್ ವಿವಾದ: ಶಾಸಕ ರಘುಪತಿ ಭಟ್’ಗೆ ವಿದೇಶಗಳಿಂದ ಬೆದರಿಕೆ

ಉಡುಪಿ ಫೆ.12: ನಗರದಲ್ಲಿ ಹಿಜಾಬ್ ವಿವಾದದ ಬೆನ್ನಲ್ಲೇ ಶಾಸಕ ರಘುಪತಿ ಭಟ್ ಅವರಿಗೆ ವಿದೇಶಗಳಿಂದ ಬೆದರಿಕೆ ಕರೆಗಳು ಬರುತ್ತಿದೆಯಂತೆ.

ಈ ವಿಚಾರವಾಗಿ ಉಡುಪಿ ಶಾಸಕ ರಘುಪತಿ ಭಟ್ ಅವರು ಗೃಹ ಸಚಿವರಿಗೆ ಮೌಖಿಕವಾಗಿ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದಂತೆ, ವಿದೇಶಗಳಿಂದ, ಹೈದರಾಬಾದ್‌ ನಿಂದ ಇಂಟರ್‌ ನೆಟ್‌ ಕಾಲ್‌ ಮೂಲಕ ಬೆದರಿಕೆ ಕರೆ ಬಂದಿದ್ದು, ‘ನಿನ್ನನ್ನು ನಾವು ನೋಡಿಕೊಳ್ಳುತ್ತೇವೆ, ನಿನ್ನನ್ನು ಹೇಗೆ ನಿಯಂತ್ರಿಸಬೇಕು ಗೊತ್ತಿದೆ’ ಎಂದು ಕೆಲವು ನಂಬರ್‌ ಗಳಿಂದ ಕರೆ ಬಂದಿದೆ. ಈ ಬಗ್ಗೆ ರಾಜ್ಯ ಗೃಹ ಸಚಿವರಿಗೆ ದೂರು ನೀಡಿರುವುದಾಗಿ ಅವರು ಹೇಳಿದ್ದಾರೆ. ಇನ್ನೂ ಈ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಗನ್‌ ಮ್ಯಾನ್‌ ಪಡೆದುಕೊಳ್ಳುವಂತೆ ತಿಳಿಸಿದ್ದಾರೆ. ಆದರೆ ನನಗೆ ಯಾವುದೇ ಗನ್‌ ಮ್ಯಾನ್ ಬೇಡ ನನಗೆ ನನ್ನ ಜನಗಳೇ ಭದ್ರತೆಗೆ ಇದ್ದಾರೆ. ಇಂತಹ ಬೆದರಿಕೆ ಕರೆಗಳಿಗೆ ಜಗ್ಗುವ ವ್ಯಕ್ತಿ ನಾನಲ್ಲ ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!