ಹಿಜಾಬ್ ವಿವಾದ ರಾಜಸ್ಥಾನದಲ್ಲೂ ಸದ್ದು

ಜೈಪುರ ಫೆ.11: ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿದ್ದ ಹಿಜಾಬ್ ವಿವಾದವನ್ನು ಹೈಕೋರ್ಟ್ ಮಧ್ಯಂತರ ಆದೇಶ ನೀಡುವ ಮೂಲಕ ಸ್ವಲ್ಪ ಮಟ್ಟಿಗೆ ತಣ್ಣಗಾಗಿಸಿದೆ. ಆದರೆ ಇದೀಗ ಕರ್ನಾಟಕದ ಹಿಜಾಬ್ ವಿವಾದ ರಾಜಸ್ಥಾನದಲ್ಲೂ ಸದ್ದು ಮಾಡಿದೆ.

ರಾಜಸ್ಥಾನದ ಜೈಪುರ ಜಿಲ್ಲೆಯ ಚಕ್ಸು ಎಂಬಲ್ಲಿನ ಖಾಸಗಿ ಕಾಲೇಜೊಂದಲ್ಲಿ ನಿನ್ನೆ ಬುರ್ಖಾ ಧರಿಸಿ ಬಂದ ಕೆಲವು ಹುಡುಗಿಯರನ್ನು ಕಾಲೇಜಿಗೆ ಪ್ರವೇಶಿಸದಂತೆ ತಡೆಯಲಾಗಿದೆ ಎಂಬ ಸುದ್ದಿಯೊಂದು ವರದಿಯಾಗಿದೆ. ವರದಿಗಳ ಪ್ರಕಾರ, ಕಸ್ತೂರಿ ದೇವಿ ಕಾಲೇಜಿನ ಕೆಲವು ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಕಾಲೇಜು ಆಡಳಿತ ಮಂಡಳಿ ಅವಕಾಶ ನೀಡಿಲ್ಲ. ಇದರಿಂದ ಕೋಪಗೊಂಡ ವಿದ್ಯಾರ್ಥಿನಿಯರು ತಮ್ಮ ಕುಟುಂಬದ ವರಿಗೆ ಮಾಹಿತಿ ನೀಡಿ, ಅವರನ್ನು ಸ್ಥಳಕ್ಕೆ ಕರೆಸಿಕೊಂಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ವಿದ್ಯಾರ್ಥಿಗಳ ಪೋಷಕರನ್ನು ಸಮಾಧಾನಪಡಿಸಿದ್ದಾರೆ. “ಕಾಲೇಜಿನಲ್ಲಿ ಸಮವಸ್ತ್ರವನ್ನು ಧರಿಸಲು ಅವರಿಗೆ ಮನವರಿಕೆಯಾಯಿತು. ಮಾತುಕತೆಯ ಮೂಲಕ ಸಮಸ್ಯೆಯನ್ನು ಪರಿಹರಿಸಲಾಗಿದೆ” ಎಂದು ಚಕ್ಸು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಜಿತೇಂದ್ರ ಸಿಂಗ್ ಅವರು ತಿಳಿಸಿದ್ದಾರೆ.

ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ಕಾಂಗ್ರೆಸ್ ಶಾಸಕ ವಾಜಿಬ್ ಅಲಿ ಹೇಳಿದ್ದಾರೆ. ಹಾಗೂ“ದ್ವೇಷದ ವ್ಯಾಪಾರಿಗಳು ಈಗ ರಾಜಸ್ಥಾನವನ್ನು ವಿಷಪೂರಿತಗೊಳಿಸಲು ಬಯಸುತ್ತಾರೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಈ ಘಟನೆಯನ್ನು ಅರಿತುಕೊಂಡು ಕಠಿಣ ಕ್ರಮ ಕೈಗೊಳ್ಳಬೇಕು ” ಎಂದು ವಾಜಿದ್ ಅಲಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!