ಉಡುಪಿ: ಜಿಲ್ಲೆಯಲ್ಲಿ ಫೆ.14 -19 ವರೆಗೆ ಸೆಕ್ಷನ್ 144 ಜಾರಿ- ಜಿಲ್ಲಾಧಿಕಾರಿ ಆದೇಶ

ಉಡುಪಿ: ಉಡುಪಿಯಲ್ಲಿ ಆರಂಭ ವಾದ ಹಿಜಾಬ್ ಕೇಸರಿ ಕಿಚ್ಚು ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ನಾಳೆಯಿಂದ ಶಿಕ್ಷಣ ಸಂಸ್ಥೆಗಳು ಆರಂಭವಾಗುತ್ತಿದ್ದು, ಜಿಲ್ಲೆಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಈ ಸಂಬಂಧ ಆದೇಶ ಹೊರಡಿಸಿದ್ದಾರೆ.

ಫೆ.14 ರಿಂದ ಫೆಬ್ರವರಿ 19 ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಶಾಲೆಯ ಸುತ್ತಮುತ್ತ ಗುಂಪು ಸೇರುವಂತಿಲ್ಲ, ಪ್ರತಿಭಟನೆ, ಮೆರವಣಿಗೆ, ಪರ ವಿರುದ್ಧ ಘೋಷಣೆ ಕೂಗುವಂತಿಲ್ಲ. ಯಾವುದೇ ವ್ಯಕ್ತಿ, ಜಾತಿ ಧರ್ಮದ ವಿರುದ್ದ ನಡೆದುಕೊಳ್ಳುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!