ಹಿಜಾಬ್‌ ವಿವಾದ ಬಗ್ಗೆ ಕೋರ್ಟ್‌ಗೆ ಹೋಗಲು ನಾವೇ ಹೇಳಿರುವುದು- ಅಮೃತ್ ಶೆಣೈ

ಉಡುಪಿ:ಹಿಜಾಬ್‌ ವಿವಾದ ಆರಂಭವಾದ ಬಳಿಕ ನಾವು ಕಾಲೇಜಿಗೆ ಭೇಟಿ ನೀಡಿದೇವು. ಆಗ ಅಲ್ಲಿ ಹಿಜಾಬ್‌ಗೆ ಅವಕಾಶ ಇರಲಿಲ್ಲ ಎಂಬುದು ಗೊತ್ತಾಯಿತು.ಅದಕ್ಕೆ ಮಕ್ಕಳಿಗೆ ನಾವೇ ಕೋರ್ಟ್‌ಗೆ ಹೋಗಲು ಹೇಳಿರುವುದು,ನಾವೇ ಅವರಿಗೆ ವಕೀಲರ ವ್ಯವಸ್ಥೆ ಮಾಡಿರುವುದು.ಕೋರ್ಟ್ ಹೋಗುವುದು ಅವರ ಹಕ್ಕು ಎಂದು ಸಹಬಾಳ್ವೆ ಅಧ್ಯಕ್ಷ ಅಮೃತ್ ಶೆಣೈ ತಿಳಿಸಿದ್ದಾರೆ.

ಉಡುಪಿ ತಾಲೂಕು ಸೌಧದಲ್ಲಿ ಭಾನುವಾರ ನಡೆದ ಶಾಂತಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶೆಣೈ ನಮಗೆ ಕುಂದಾಪುರ, ಎಂಜಿಎಂ ಕಾಲೇಜುಗಳಲ್ಲಿ ನಡೆದ ಘಟನೆಯ ಬಗ್ಗೆ ಅಸಮಾಧಾನ ಇದೆ. ಆ ಕಾಲೇಜುಗಳಲ್ಲಿ ಎಷ್ಟೋ ವರ್ಷಗಳಿಂದ ಹಿಜಾಬ್ ಹಾಕಿಕೊಂಡು ಬಂದು ಕಲಿತು ಡಾಕ್ಟರ್, ಇಂಜಿನಿಯರ್ ಆದವರು ಇದ್ದಾರೆ. ಅಲ್ಲಿ ಇಷ್ಟು ದಿನ ಸಮಸ್ಯೆ ಇರಲಿಲ್ಲ. ಈಗ ಏಕಾಏಕಿ ಕೆಲವು ಹುಡುಗರು ಕೇಸರಿ ಶಾಲು ಹಾಕಿಕೊಂಡು ಪುಂಡಾಟಿಕೆ ಮಾಡಿದ್ದಾರೆ. ಕೇಸರಿ ಎಂಬುದು ಧಾರ್ಮಿಕ ಪವಿತ್ರ ಬಣ್ಣ. ಈ ರೀತಿ ಕಾನೂನು ಉಲ್ಲಂಘನೆ ಚಟುವಟಿಕೆಗಳಿಗೆ ಬಳಸುವುದು ಸರಿಯಲ್ಲ. ಅಂತಹ ಘಟನೆ ಮುಂದೆ ಕಾಲೇಜು ಪುನಾರಂಭ ಆಗುವಾಗ ಆಗದಂತೆ ಎಚ್ಚರ ವಹಿಸಬೇಕೆಂದು ನಾವು ಸರಕಾರವನ್ನು ಒತ್ತಾಯಿಸಿದ್ದೇವೆ ಎಂದು ಅವರು ಹೇಳಿದರು.

Leave a Reply

Your email address will not be published. Required fields are marked *

error: Content is protected !!