ಹಿರಿಯಡ್ಕ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಹಿರಿಯಡ್ಕ ಫೆ.14 (ಉಡುಪಿ ಟೈಮ್ಸ್ ವರದಿ): ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಹಿರಿಯಡ್ಕದ ಕೃಷ್ಣ  ಸಾಲಿಯಾನ್ ಎಂಬವರು ಮನೆಯ ಸಮೀಪ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
65 ವರ್ಷದ ಕೃಷ್ಣ ಸಾಲಿಯಾನ್ ಅವರು ಮಾನಸಿಕ ಅಸ್ವಸ್ಥತೆಯಿಂದಲೂ ಬಳಲುತ್ತಿದ್ದರು. ಈ ಕಾರಣದಿಂದ ಚಿಂತೆಯಲ್ಲಿ ಇದ್ದು, ಜೀವನದಲ್ಲಿ ಜಿಗುಪ್ಸೆಗೊಂಡು ಇಂದು ಬೆಳಿಗ್ಗೆ ಮನೆಯ ಬಳಿಯಲ್ಲಿರುವ ಮರಕ್ಕೆ ನೇಣು ಬೀಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!