ಉಡುಪಿ ಹೋಂ ಕ್ವಾರಂಟೈನ್ ಉಲ್ಲಂಘನೆ: 69 ವ್ಯಕ್ತಿಗಳ ವಿರುದ್ಧ ಎಫ್ ಐ ಆರ್
ಉಡುಪಿ: ಜಿಲ್ಲೆಗೆ ವಿದೇಶ ಹೊರರಾಜ್ಯಗಳಿಂದ ಬಂದಿರುವ ವ್ಯಕ್ತಿಗಳು ಹಾಗೂ ಕೋವಿಡ್ ಪಾಸಿಟಿವ್ ವ್ಯಕ್ತಿಗಳ ಪ್ರಾಥಮಿಕ ಸಂಪರ್ಕದಲ್ಲಿದ್ದ ವ್ಯಕ್ತಿಗಳನ್ನು ಹೋಂ ಕ್ವಾರಂಟೈನ್‌ನಲ್ಲಿ ಇಡಲಾಗಿದೆ. ಅವರು 14 ದಿನ ಹೋಂ ಕ್ವಾರಂಟೈನ್ ನಲ್ಲಿ ಇರುವುದು ಕಡ್ಡಾಯವಾಗಿರುತ್ತದೆ. ಆದರೆ ಕೆಲವರು ನಿಯಮ ಬಾಹಿರವಾಗಿ ಹೊರಗಡೆ ತಿರುಗುತ್ತಿರುವುದು ಕಂಡುಬಂದಿರುತ್ತದೆ. ಇದರಿಂದಾಗಿ ಕೋವಿಡ್ ರೋಗ ನಿಯಂತ್ರಣದಲ್ಲಿ ಹಿನ್ನಡೆಯಾಗುತ್ತಿದೆ. ಹೋಂ ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘನೆ ಮಾಡುವವರ ವಿರುದ್ದ ನಿಗಾ ಇಡಲು (Quarantine Watch App) ತಂತ್ರಜ್ಞಾನದ ಬಳಕೆಯಾಗುತ್ತಿದ್ದು, ಇದರಿಂದಾಗಿ ಹೋಂ ಕ್ವಾರಂಟೈನ್ ಉಲ್ಲಂಘನೆ ಮಾಡುತ್ತಿರುವ ವ್ಯಕ್ತಿಗಳ ಮಾಹಿತಿ ಲಭ್ಯವಾಗುತ್ತದೆ. ಅಂತಹವರ ವಿರುದ್ಧ ಈಗಾಗಲೇ ಅಧಿಕಾರಿಗಳು ಅವರ ಮನ ಭೇಟಿ ಮಾಡಿ ಎಚ್ಚರಿಕೆ ಗಳನ್ನು ಕೊಟ್ಟು ಹೊರಗೆ ತಿರುಗಾಟ ನಡೆಸದಂತೆ ಮನವರಿಕೆ ಮಾಡಿದರು ಕೂಡ ನಿಯಮಗಳನ್ನು ಪಾಲಿಸದೇ ಪುನರಪಿ ಉಲ್ಲಂಘನೆ ಮಾಡಿರುವ ಒಟ್ಟು 69 ವ್ಯಕ್ತಿಗಳ ವಿರುದ್ಧ FIR ದಾಖಲಿಸಲಾಗಿದೆ. ಹೋಂ ಕ್ವಾರಂಟೈನ್ ಹಾಗೂ ಹೋಂ ಐಸೋಲೇಷನ್ ನಲ್ಲಿರುವ ಯಾರೂ ಕೂಡ ಹೋಂ ಕ್ವಾರಂಟೈನ್ ಉಲ್ಲಂಘನೆ ಮಾಡಿ ಹೊರಗಡೆ ತಿರುಗಾಟ ನಡೆಸಬಾರದಾಗಿ ಎಚ್ಚರಿಕೆ ನೀಡಲಾಗಿದೆ. ಒಂದು ವೇಳೆ ಉಲ್ಲಂಘನೆ ಮಾಡಿದ್ದಲ್ಲಿ ಅಂತಹವರ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು. |