ಕಾಪು: ಫೆ.20 ರಂದು “ಗುರ್ಮೆ ಗೋ ವಿಹಾರ ಕೇಂದ್ರ” ಲೋಕಾರ್ಪಣೆ

ಕಾಪು ಫೆ.15 (ಉಡುಪಿ ಟೈಮ್ಸ್ ವರದಿ): ಗುರ್ಮೆ ಫೌಂಡೇಶನ್ ಕಳತ್ತೂರು ವತಿಯಿಂದ ಕಾಪು ತಾಲೂಕಿನ ಕಳತ್ತೂರು ಗುರ್ಮೆಯಲ್ಲಿ ನೂತನವಾಗಿ ನಿರ್ಮಿಸಲಾದ “ಗುರ್ಮೆ ಗೋ ವಿಹಾರ ಕೇಂದ್ರ” ಲೋಕಾರ್ಪಣೆ ಕಾರ್ಯಕ್ರಮ ಮತ್ತು ದಿ.ಪದ್ಮಾವತಿ ಪಿ. ಶೆಟ್ಟಿ ಗುರ್ಮೆ ಅವರ 4ನೇ ಪುಣ್ಯತಿಥಿಯ ಪ್ರಯುಕ್ತ ಕೀರ್ತನ – ಸಾಂತ್ವನ – ಯಕ್ಷಗಾನ ಕಾರ್ಯಕ್ರಮ ಫೆ. 20 ರಂದು ನಡೆಯಲಿದೆ ಎಂದು ಗುರ್ಮೆ ಫೌಂಡೇಶನ್ ನ ಸುರೇಶ್ ಶೆಟ್ಟಿ ಗುರ್ಮೆ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಕಾರ್ಯಕ್ರಮ ವನ್ನು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಲಿದ್ದಾರೆ.ಹಾಗೂ ಕಾರ್ಯಕ್ರಮದಲ್ಲಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ, ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಗೌರಿ ಗದ್ದೆ ಸ್ವರ್ಣ ಪೀಠಿಕಾಪುರದ ಶ್ರೀ ವಿನಯ ಗುರೂಜಿ, ಸಚಿವರಾದ ಎಸ್. ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ವಿ.ಸುನಿಲ್ ಕುಮಾರ್, ಶಾಸಕರಾದ ರಘುಪತಿ ಭಟ್, ಲಾಲಾಜಿ ಆರ್.ಮೆಂಡನ್, ಎಂ.ಜಿ.ಆರ್ ಗ್ರೂಫ್ಸ್ ನ ಚಯರ್‌ಮೇನ್ ಕೆ.ಪ್ರಕಾಶ್ ಶೆಟ್ಟಿ ಬಂಜಾರ, ಮೂಡಬಿದ್ರೆ ಆಳ್ವಾಸ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಮೋಹನ್ ಆಳ್ವ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಇನ್ನು ಕೀರ್ತನ – ಸಾಂತ್ವನ – ಯಕ್ಷಗಾನ ಕಾರ್ಯಕ್ರಮದ ಅಂಗವಾಗಿ ಸಂಜೆ 4.00 ಗಂಟೆಗೆ ಶ್ರೀಕಾಂತ ಶೆಟ್ಟಿ ಕಾರ್ಕಳ ಮತ್ತು ಬಳಗ, ಸಂದೇಶ ನೀರುಮಾರ್ಗ ಮತ್ತು ಬಳಗ ಮಂಗಳೂರು ಇವರಿಂದ ಭಜನಾ ಸಂಕೀರ್ತನೆ ನಡೆಯಲಿದೆ. ಸಂಜೆ 4.30 ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಸಾಂತ್ವನ ಕಾರ್ಯಕ್ರಮದಡಿ ಸುಮಾರು 500 ಮಂದಿ ಅನಾರೋಗ್ಯ ಪೀಡಿತರಿಗೆ ಧನ ಸಹಾಯ, 280 ಮಂದಿ ಕೊರೊನಾ ವಾರಿಯರ್ಸ್ ಗೆ ಸನ್ಮಾನ, ಪೌರ ಕಾರ್ಮಿಕರಿಗೆ ಗೌರವಾರ್ಪಣೆ ಸಹಿತವಾಗಿ ವಿವಿಧ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಬಳಿಕ ಭಜನಾ ಸಂಕೀರ್ತನೆ ಮುಂದುವರಿಯಲಿದೆ.

ಹಾಗೂ ರಾತ್ರಿ 8 ರಿಂದ ಶ್ರೀ ಗುರು ನರಸಿಂಹ ದಶಾವತಾರ ಯಕ್ಷಗಾನ ಮಂಡಳಿ ಸಾಲಿಗ್ರಾಮ ಇವರಿಂದ ದಕ್ಷ ಯಜ್ಞ – ರಾಜಾ ರುದ್ರಕೋಪ ಎಂಬ ಕಾಲಮಿತಿ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!