ಕನ್ನಡದ ಜನಪ್ರಿಯ ಹಿರಿಯ ಕವಿ ನಾಡೋಜ ಡಾ. ಚನ್ನವೀರ ಕಣವಿ ನಿಧನ

ಧಾರವಾಡ ಫೆ.16 : ಕನ್ನಡದ ಜನಪ್ರಿಯ ಹಿರಿಯ ಕವಿ ನಾಡೋಜ ಡಾ. ಚನ್ನವೀರ ಕಣವಿ ಅವರು ನಿಧನರಾಗಿದ್ದಾರೆ.

ಕೋವಿಡ್‌ ಸೋಂಕಿಗೆ ತುತ್ತಾಗಿದ್ದ 93 ವರ್ಷದ ಕಣವಿ ಅವರನ್ನು ಜ.14 ರಂದು ಧಾರವಾಡದ ಎಸ್‌ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು  ಕೊನೆಯುಸಿರೆಳೆದಿದ್ದಾರೆ. ಜೂನ್ 28, 1928ರಂದು ಧಾರವಾಡ ಜಿಲ್ಲೆಯ ಹೊಂಬಳದಲ್ಲಿ ಜನಿಸಿದ್ದ ಚನ್ನವೀರ ಕಣವಿಯವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಬಿಎ ಮತ್ತು ಎಂಎ ಪದವಿ ಪಡೆದರು. ಕರ್ನಾಟಕ ವಿಶ್ವವಿದ್ಯಾಲಯದ ವ್ಯಾಸಂಗ ಪ್ರಸರಣ ಮತ್ತು ಪ್ರಕಟಣಾ ವಿಭಾಗದ ಕಾರ್ಯದರ್ಶಿಯಾಗಿ, ಪ್ರಸಾರಾಂಗದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.
ಡಾ. ಚನ್ನವೀರ ಕಣವಿ ಮೊದಲ ಕವಲ ಸಂಕಲನ ಕಾವ್ಯಾಕ್ಷಿ 1949ರಲ್ಲಿ ಬಿಡುಗಡೆಯಾಗಿತ್ತು. ಭಾವಜೀವಿ, ಆಕಾಶಬುಟ್ಟಿ, ಮಣ್ಣಿನ ಮೆರವಣಿಗೆ, ನೆಲಮುಗಿಲು, ಜೀವಧ್ವನಿ ಮುಂತಾದ ಕವನ ಸಂಕಲನಗಳನ್ನು ಅವರು ರಚಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!