ಉಡುಪಿ: ಸರ್ಕಾರಿ ಜಮೀನು ಒತ್ತುವರಿ ಕಂಡು ಬಂದಲ್ಲಿ ದೂರು ನೀಡಿ
ಉಡುಪಿ, ಫೆ.16: ಜಿಲ್ಲೆಯಲ್ಲಿ ಸರ್ಕಾರಿ ಜಮೀನು, ಕೆರೆ, ಕಟ್ಟೆ, ಕುಂಟೆ, ಹಳ್ಳ, ಸರೋವರ ಮತ್ತು ಇನ್ನಿತರ ಜಲಕಾಯ/
ಜಲಮೂಲಗಳೆಂದು ವರ್ಗೀಕೃತವಾದ ಜಮೀನುಗಳನ್ನು ಗ್ರಾಮ ನಕಾಶೆಯಲ್ಲಿ ರಸ್ತೆ, ಬೀದಿ, ಬಂಡಿದಾರಿ, ಓಣಿ ಅಥವಾ ಹಾದಿ ಎಂದು ನಮೂದಾಗಿರುವ ಇತರೆ ಎಲ್ಲಾ ಸರ್ಕಾರಿ ಜಮೀನುಗಳು ಒತ್ತುವರಿಯಾಗಿದ್ದಲ್ಲಿ ಸಾರ್ವಜನಿಕರು ಜಿಲ್ಲಾಧಿಕಾರಿಗಳಿಗೆ ಅಥವಾ ಸಂಬ0ಧಪಟ್ಟ ತಹಶೀಲ್ದಾರಿಗೆ ದೂರು ನೀಡುವಂತೆ ಉಡುಪಿ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.