ಉಡುಪಿ: ಸ್ಮಶಾನ ಭೂಮಿ ಕಾಯ್ದಿರಿಸುವ ಕುರಿತು
ಉಡುಪಿ, ಫೆ.16: ಜಿಲ್ಲೆಯಲ್ಲಿನ ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿ ಸ್ಮಶಾನ ಭೂಮಿ ಕಲ್ಪಿಸುವುದು ಸರಕಾರದ
ಉದ್ದೇಶವಾಗಿದ್ದು, ಸ್ಮಶಾನ ಕಲ್ಪಿಸಲು ಸರ್ಕಾರದ ಜಮೀನು ಲಭ್ಯವಿರುವ ಕಡೆ ಸ್ಮಶಾನ ಉದ್ಧೇಶಕ್ಕಾಗಿ 2 ಎಕರೆ ವಿಸ್ತೀರ್ಣದ ಜಮೀನನ್ನು ಕಾಯ್ದಿರಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ಪ್ರತ್ಯಾಯೋಜಿಸಲಾಗಿರುತ್ತದೆ. ರಾಜ್ಯ ಭೂಕಂದಾಯ ಕಾಯ್ದೆ 1964 ರ ಕಲಂ 71 ರಡಿ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ಸರ್ಕಾರಿ ಜಮೀನು ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ.
ಗೋಮಾಳ ಜಮೀನು ನಿಗಧಿತ ಪ್ರಮಾಣಕ್ಕಿಂತ ಕಡಿಮೆ ಇದ್ದರೂ, ಸರ್ಕಾರಿ ಜಮೀನು ಬಖರಾಬು ಎಂದು ವರ್ಗೀ ಕೃತವಾಗಿದ್ದಲ್ಲಿ, ಒತ್ತುವರಿಯಿಂದ ತೆರವುಗೊಳಿಸಿರುವ ಸರ್ಕಾರಿ ಜಮೀನುಗಳನ್ನು ಸಹ ಜಿಲ್ಲಾಧಿಕಾರಿಗಳು ಸ್ಮಶಾನದ ಉದ್ದೇಶಕ್ಕಾಗಿ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ. ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ಮಾಡುತ್ತಿರುವ ಸಾಗುವಳಿಯನ್ನು ಸಕ್ರಮೀಕರಣಕ್ಕಾಗಿ ಸಲ್ಲಿಸುವ ಅರ್ಜಿಗಳ ಪೈಕಿ ಅನರ್ಹ ಅರ್ಜಿಗಳು ಇದ್ದಲ್ಲಿ, ಜಿಲ್ಲಾಧಿಕಾರಿಗಳ ಹಂತದಲ್ಲಿ ಅಂತಹ ಅನರ್ಹ ಅರ್ಜಿಗಳನ್ನು ವಜಾಗೊಳಿಸಿ, ಜಮೀನನ್ನು ಸರ್ಕಾರದ ವಶಕ್ಕೆ ಪಡೆದು ಸ್ಮಶಾನಕ್ಕಾಗಿ ಕಾಯ್ದಿರಿಸಬಹುದು. ಈ ಮೇಲ್ಕಂಡ ಎಲ್ಲಾ ಕ್ರಮಗಳನ್ನು ಕೈಗೊಂಡ ನಂತರವೂ ಸಹ ಯಾವುದೇ ಗ್ರಾಮದಲ್ಲಿ ಸ್ಮಶಾನಕ್ಕಾಗಿ ಕಾಯ್ದಿರಿಸಲು ಸರ್ಕಾರಿ ಜಮೀನು ಲಭ್ಯವಿಲ್ಲದಿದ್ದಲ್ಲಿ ಅಂತಹ ಗ್ರಾಮಗಳಲ್ಲಿ ಮಾರ್ಗಸೂಚಿ ಮೌಲ್ಯದ ಮೂರುಪಟ್ಟು ದರದಲ್ಲಿ ಖಾಸಗಿಯವರಿಂದ ಜಮೀನುಗಳನ್ನು ಖರೀದಿಸಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ತಮ್ಮ ಗ್ರಾಮಗಳಲ್ಲಿ ಸ್ಮಶಾನದ ಅವಶ್ಯಕತೆ ಇದ್ದಲ್ಲಿ ಜಿಲ್ಲಾಧಿಕಾರಿಯವರಿಗೆ ಅಥವಾ ಸಂಬOಧಪಟ್ಟ ತಹಶೀಲ್ದಾರಿಗೆ ಅರ್ಜಿ ಸಲ್ಲಿಸುವಂತೆ ಉಡುಪಿ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.