ದ.ಕ., ಉಡುಪಿ ಸಹಿತ 23 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ ಕಡಲಿಗೆ ಇಳಿಯದಂತೆ ಎಚ್ಚರಿಕೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡಿನಲ್ಲಿ ಜು.29 ಮತ್ತು 30ರಂದು ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ 23 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ ಹವಾಮಾನ ಇಲಾಖೆ ಘೋಷಿಸಿಸಿದೆ.


ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಕಲಬುರ್ಗಿ, ಗದಗ, ಧಾರವಾಡ, ಬೀದರ್, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬುಧವಾರ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಈ ಭಾಗದಲ್ಲಿ ಆಗಸ್ಟ್ 1ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿಯಲ್ಲಿ ವೇಗವಾದ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಎರಡು ದಿನಗಳವರೆಗೆ ಕಡಲಿಗೆ ಇಳಿಯದಂತೆ ಎಚ್ಚರಿಸಿದೆ.

Leave a Reply

Your email address will not be published. Required fields are marked *

error: Content is protected !!