ಕನ್ನಡದ ಹಿರಿಯ ನಟ ‘ಕಲಾತಪಸ್ವಿ’ ರಾಜೇಶ್ ನಿಧನ

ಬೆಂಗಳೂರು ಫೆ.19: ಹಿರಿಯ ನಟ ಕಲಾತಪಸ್ವಿ ರಾಜೇಶ್ ಅವರು  ಇಂದು ವಯೋ ಸಹಜ ಅನಾರೋಗ್ಯ ದಿಂದ ನಿಧನರಾಗಿದ್ದಾರೆ.

89 ವರ್ಷದ ಕಲಾತಪಸ್ವಿ ರಾಜೇಶ್ ಅವರನ್ನುಕಿಡ್ನಿ ವೈಫಲ್ಯ ಹಾಗೂ ತೀವ್ರ ಉಸಿರಾಟ ಸಮಸ್ಯೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಕೆಲ ದಿನಗಳಿಂದ ರಾಜೇಶ್‌ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಇಂದು ಮುಂಬಾನೆ ಅವರು ಕೊನೆಯುಸಿರೆಳೆದಿದ್ದಾರೆ. ವಿದ್ಯಾರಣ್ಯಪುರದಲ್ಲಿರುವ ನಿವಾಸದಲ್ಲಿ ಇಂದು ಸಂಜೆಯವರೆಗೆ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ.

150ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ರಾಜೇಶ್ ಅವರು, ಶಕ್ತಿ ನಾಟಕ ಮಂಡಳಿಯನ್ನು ಸ್ಥಾಪಿಸಿದ್ದು. ಧಾರವಾಡ ವಿಶ್ವವಿದ್ಯಾಲಯ ರಾಜೇಶ್ ಅವರಿಗೆ ಡಾಕ್ಟರೇಟ್ ಗೌರವವನ್ನು ಸಲ್ಲಿಸಿತ್ತು. ಕೆಲ ದಿನಗಳ ಹಿಂದೆ ಪತ್ನಿಯನ್ನು ಕಳೆದುಕೊಂಡಿದ್ದ ರಾಜೇಶ್ ಅವರಿಗೆ 5 ಜನ ಮಕ್ಕಳಿದ್ದಾರೆ. ʼಕಲಾತಪಸ್ವಿ ರಾಜೇಶ್’ ಎಂಬುದು ಅವರ ಆತ್ಮಚರಿತ್ರೆಯ ಹೆಸರಾಗಿದ್ದು, ಅವರು ಸೊಸೆ ತಂದ ಸೌಭಾಗ್ಯ, ನಮ್ಮ ಊರು, ಗಂಗೆ ಗೌರಿ, ಬೆಳುವಲದ ಮಡಿಲಲ್ಲಿ, ಕಪ್ಪು ಬಿಳುಪು, ಬೃಂದಾವನ, ಬೋರೆ ಗೌಡ ಬೆಂಗಳೂರಿಗೆ ಬಂದ, ಮರೆಯದ ದೀಪಾವಳಿ, ಪ್ರತಿಧ್ವನಿ, ಕಾವೇರಿ, ದೇವರ ಗುಡಿ, ಬದುಕು ಬಂಗಾರವಾಯ್ತು, ಸೊಸೆ ತಂದ ಸೌಭಾಗ್ಯ, ಮುಗಿಯದ ಕಥೆ, ಬಿಡುಗಡೆ, ದೇವರದುಡ್ಡು, ಕಲಿಯುಗ, ಪಿತಾಮಹ ಮುಂತಾದ ಚಿತ್ರಗಳಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದರು.

Leave a Reply

Your email address will not be published. Required fields are marked *

error: Content is protected !!