ಅಯೋಧ್ಯೆಯಲ್ಲಿ ದಾಳಿಗೆ ಉಗ್ರರ ಸಂಚು: ಗುಪ್ತಚರ ಇಲಾಖೆ

ನವದೆಹಲಿ: ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಆಗಸ್ಟ್ 5ರಂದು ನಡೆಯಲಿರುವ ಶಿಲಾನ್ಯಾಸದ ಕಾರ್ಯಕ್ರಮದ ವೇಳೆ ದಾಳಿ ನಡೆಸಲು ಉಗ್ರರು ಸಂಚು ನಡೆಸಿದ್ದು ಉಗ್ರರಿಗೆ ಐಎಸ್ಐ ತರಬೇತಿ ನೀಡುತ್ತಿದೆ ಎಂದು ಗುಪ್ತಚರ ಇಲಾಖೆ ಎಚ್ಚರಿಸಿದೆ. 

ಅಯೋಧ್ಯೆ ಇಲ್ಲದೆ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ಕೂಡ ಧಾರ್ಮಿಕ ಕೇಂದ್ರಗಳನ್ನು ಗುರಿಯಾಗಿಸಿ ದಾಳಿ ನಡೆಸಲು ಸಂಚು ರೂಪಿಸಲಾಗಿದೆ. ಪಾಕಿಸ್ತಾನದ ಗುಪ್ತಚರ ಸಂಸ್ಥೆ(ಐಎಸ್ಐ) ನೆರವಿನೊಂದಿಗೆ ಭಾರತದಲ್ಲಿ ವಿಧ್ವಂಸಕ ಸೃಷ್ಟಿಸಲು ಸಂಚು ರೆಡಿಯಾಗಿದೆ ಎಂದು ಗುಪ್ತಚರ ಇಲಾಖೆ ಕೇಂದ್ರಕ್ಕೆ ಮಾಹಿತಿ ನೀಡಿದೆ. 

ಭಾರತದಲ್ಲಿನ ಪ್ರಸಿದ್ಧ ಧಾರ್ಮಿಕ ಸ್ಥಳಗಳ ಮೇಲೆ ದಾಳಿ ನಡೆಸಲು ಆಫ್ಗಾನಿಸ್ತಾನದ ಲಷ್ಕರ್ ಇ ತೊಯ್ಬಾ ಹಾಗೂ ಜೈಷ್ ಎ ಮೊಹಮ್ಮದ್ ಸಂಘಟನೆಗಳು ದಾಳಿ ನಡೆಸಲು ಸಂಚು ರೂಪಿಸಿದ್ದು ಇದಕ್ಕಾಗಿ 3ರಿಂದ 5 ಗುಂಪು ಭಾರತಕ್ಕೆ ನುಗ್ಗಲಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. 

ಧಾರ್ಮಿಕ ಕ್ಷೇತ್ರಗಳು ಮತ್ತು ರಾಜಕೀಯ ಮುಖಂಡರ ಮೇಲೆ ದಾಳಿ ಮಾಡಿ ಇದನ್ನು ಆಂತರಿಕ ದಾಳಿ ಎಂದು ಬಿಂಬಿಸಲು ಸಂಚು ರೂಪಿಸಿದ್ದು ಇದು ಅತ್ಯಂತ ಅಪಾಯಕಾರಿಯಾದದ್ದು ಎಂದು ಇಲಾಖೆ ಎಚ್ಚರಿಸಿದೆ. 

Leave a Reply

Your email address will not be published. Required fields are marked *

error: Content is protected !!