ಹರ್ಷ ಕೊಲೆ ಪ್ರಕರಣದಲ್ಲಿ ಪಿಎಫ್’ಐ ಹಾಗೂ ಎಸ್ಡಿಪಿಐ ಷಡ್ಯಂತ್ರವಿದೆ- ಶೋಭಾ ಕರಂದ್ಲಾಜೆ
ಉಡುಪಿ ಫೆ.21: ಶಿವಮೊಗ್ಗದ ಹರ್ಷ ಅವರ ಕೊಲೆ ಪ್ರಕರಣದ ತನಿಖೆ ನಡೆಸಲು ಪ್ರಕರಣವನ್ನು ಎನ್ ಐಎ ಗೆ ಹಸ್ತಾಂತರಿಸುವಂತೆ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಅವರು ಆಗ್ರಹಿಸಿದ್ದಾರೆ.
ಈ ಬಗ್ಗೆ ಉತ್ತರ ಪ್ರದೇಶದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, “ಈ ರೀತಿ ಹಲವು ಹಿಂದೂ ಯುವ ಕಾರ್ಯಕರ್ತರ ಕೊಲೆಗಳಾಗಿದ್ದು, ಈ ಹಿಂದೆ ಬೆಂಗಳೂರಿನ ಹಿಂದೂ ಮುಖಂಡ ರುದ್ರೇಶ್ ಕೊಲೆಯಲ್ಲಿ ಪಾಪ್ಯುಲರ್ ಫ್ರಾಂಟ್ ಆಫ್ ಇಂಡಿಯಾ ಹಾಗೂ ಎಸ್ಡಿಪಿಐ ಸಂಘಟನೆ ಇತ್ತು ಎಂಬುದು ಸಾಬೀತಾಗಿದೆ. ಇದೇ ರೀತಿಯ ಷಡ್ಯಂತ್ರ ಹರ್ಷ ಕೊಲೆ ಪ್ರಕರಣದಲ್ಲೂ ಇದೆ. ಈ ಷಡ್ಯಂತ್ರವನ್ನು ಬಯಲು ಮಾಡಬೇಕು ಹಾಗೂ ಅಪರಾಧಿಗಳಿಗೆ ಕಠಿಣ ಶಿಕ್ಷೆ ದೊರಕುವಂತಾಗಬೇಕು.
ಈ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಕೊಡಬೇಕು ಎಂದು ಆಗ್ರಹ ಮಾಡಿ ಮುಖ್ಯಮಂತ್ರಿಗಳಿಗೆ ನಾನು ಪತ್ರ ಬರೆದಿದ್ದೇನೆ. ಅದೇ ರೀತಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಪತ್ರದ ಮುಖೇನ ವಿವರನೀಡುವ ಕೆಲಸ ಮಾಡುತ್ತೇನೆ” ಎಂದು ಅವರು ಹೇಳಿದರು. ಹಾಗೂ ಇದೇ ವೇಳೆ ಅವರು, ಕರ್ನಾಟಕ ಸರ್ಕಾರ ಕೂಡಲೇ ಹರ್ಷ ಅವರ ಕುಟುಂಬಕ್ಕೆ ಹಣಕಾಸಿನ ನೆರವು ನೀಡಬೇಕು ಎಂದು ಆಗ್ರಹಿಸಿದರು