ಹಿರಿಯಡ್ಕ: ವಿಷ ಸೇವಿಸಿ ಆತ್ಮಹತ್ಯೆ
ಹಿರಿಯಡ್ಕ ಫೆ.21(ಉಡುಪಿ ಟೈಮ್ಸ್ ವರದಿ): ತಮಗಿದ್ದ ಮಾನಸಿಕ ಕಾಯಿಲೆಯಿಂದ ಮನನೊಂದು ಹಿರಿಯಡ್ಕದ ಚಂದ್ರಶೇಖರ (51) ಎಂಬವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಿಪರೀತ ಕುಡಿತದ ಅಭ್ಯಾಸ ಹೊಂದಿದ್ದ ಇವರು, ತಮಗಿದ್ದ ಮಾನಸಿಕ ಕಾಯಿಲೆಯಿಂದ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ನಿನ್ನೆ ರಾತ್ರಿಯಿಂದ ಇಂದು ಮಧ್ಯಾಹ್ನದ ನಡುವಿನ ಅವಧಿಯಲ್ಲಿ ವಿಷ ಸೇವಿಸಿ ಆತಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮೃತರ ಅಣ್ಣ ಕೃಷ್ಣ ಪೂಜಾರಿ ಅವರು ನೀಡಿದ ದೂರಿನಂತೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.