ಉಡುಪಿ: 173 ಪಾಸಿಟಿವ್, 487 ಮಂದಿಯಲ್ಲಿ ನೆಗೆಟಿವ್ ವರದಿ

ಉಡುಪಿ: ಜಿಲ್ಲೆಯಲ್ಲಿ 173 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢವಾಗಿದ್ದು, 487 ಮಂದಿಯ ಗಂಟಲ ದ್ರವದ ವರದಿಯಲ್ಲಿ ನೆಗೆಟಿವ್ ಬಂದಿದ್ದು, ಜುಲೈ 29 ರವರೆಗೆ 3895 ಮಂದಿಯಲ್ಲಿ ಪಾಸಿಟಿವ್ ದೃಢವಾಗಿದ್ದು, 2323 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.


ಜಿಲ್ಲೆಯಲ್ಲಿ 1547 ಸಕ್ರಿಯ ಪ್ರಕರಣಗಳಿದ್ದು, ಇವರೆಗೆ 25 ಮಂದಿ ಚಿಕಿತ್ಸೆಗೆ ಸ್ಪಂದಿಸದೆ ಮೃತ ಪಟ್ಟಿದ್ದಾರೆ.

 ರಾಜ್ಯದಲ್ಲಿ ಕೊರೋನಾ‌ ಪ್ರಕರಣಗಳು ಏರಿಮುಖವಾಗಿಯೇ ಸಾಗಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬುಧವಾರ 2270 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ 50 ಸಾವಿರದ ಗಡಿ ದಾಟಿದೆ.

ಇಂದು ರಾಜ್ಯದಲ್ಲಿ 5503 ಹೊಸ ಪ್ರಕರಣಗಳು ವರದಿಯಾಗಿದ್ದು, 92 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 1,12,504ಕ್ಕೇರಿಕೆಯಾಗಿದೆ.

ಇನ್ನು ರಾಜ್ಯದಲ್ಲಿ ಚೇತರಿಕೆ ಪ್ರಮಾಣವೂ ಉತ್ತಮವಾಗಿದ್ದು, ದಿನವೊಂದರಲ್ಲಿ 2397 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 2147 ಮಂದಿ ಸಾವನ್ನಪ್ಪಿದ್ದು, 67447 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ರಾಜಧಾನಿ ಬೆಂಗಳೂರು ನಗರದಲ್ಲಿ 2270 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 51091ಕ್ಕೇರಿಕೆಯಾಗಿದೆ. ಅಲ್ಲದೆ ಬೆಂಗಳೂರಿನಲ್ಲಿ ಮಹಾಮಾರಿಗೆ ಇಂದು 30 ಮಂದಿ ಬಲಿಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!