ಉಡುಪಿ: ಕೊರಗ ಕಾಲೋನಿಯಲ್ಲಿ ಜನ್ಮದಿನ ಆಚರಿಸಿಕೊಂಡ ಶಾಸಕ ರಘುಪತಿ ಭಟ್
ಉಡುಪಿ: ಶಾಸಕರಾದ ಕೆ.ರಘುಪತಿ ಭಟ್ ಮಣಿಪಾಲ ಸರಳಬೆಟ್ಟು ವಾರ್ಡಿನ ನೆಹರು ನಗರದ ಕೊರಗ ಕಾಲನಿಗೆ ಭೇಟಿ ನೀಡಿ ಕೊರಗ ಸಮುದಾಯದವರೊಂದಿಗೆ ತನ್ನ ಜನ್ಮದಿನವನ್ನು ಆಚರಿಸಿ ಕೊರಗರೊಂದಿಗೆ ಭೋಜನ ಸವಿದರು.
ಈ ಸಂದರ್ಭದಲ್ಲಿ ಸ್ಥಳೀಯ ನಗರಸಭಾ ಸದಸ್ಯರಾದ ವಿಜಯಲಕ್ಷ್ಮಿ, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಮಣಿಪಾಲ್, ದಿನೇಶ್ ಅಮೀನ್, ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾll. ರವಿರಾಜ್ ಆಚಾರ್ಯ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ಕೊರಗ ಮುಖಂಡರಾದ ಗಣೇಶ್ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಾದ ಎನ್. ವಿಷ್ಣುವರ್ಧನ್, ಮಣಿಪಾಲ ವೃತ್ತ ನಿರೀಕ್ಷಕರಾದ ಮಂಜುನಾಥ್ ಎಂ, ಮಲ್ಪೆ ವೃತ್ತ ನಿರೀಕ್ಷಕರಾದ ಶರಣ ಗೌಡ, ಮಣಿಪಾಲ ಪೊಲೀಸ್ ಉಪನಿರೀಕ್ಷಕರು ಹಾಗೂ ಪಕ್ಷದ ಪ್ರಮುಖರು, ಮುಖಂಡರು, ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.