ಸೀಮಂತ ಕಾರ್ಯಕ್ರಮದ ವೇಳೆ ಸಿಲಿಂಡರ್ ಸ್ಫೋಟ, ಮೂವರು ಸಾವು- 20ಕ್ಕೂ ಹೆಚ್ಚು ಮಂದಿಗೆ ಗಾಯ

ಯಾದಗಿರಿ: ಯಾದಗಿರಿ ಜಿಲ್ಲೆ ಶಹಾಪೂರ ತಾಲೂಕಿನ ದೋರನಹಳ್ಳಿಯಲ್ಲಿ ಶುಕ್ರವಾರ ಸೀಮಂತ ಕಾರ್ಯಕ್ರಮದ ವೇಳೆ ಸಿಲಿಂಡರ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ ಮತ್ತು 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ದೋರನಹಳ್ಳಿ ಗ್ರಾಮದ ಯುಕೆಪಿ ಕ್ಯಾಂಪ್ ನಲ್ಲಿ ನಿವೃತ್ತ ನೌಕರ ಸಾಹೇಬಗೌಡ ಅವರ ಮನೆ ಮುಂಭಾಗದಲ್ಲಿ ಈ ದುರ್ಘಟನೆ ನಡೆದಿದೆ. ಸಾಹೇಬಗೌಡ ಅವರ ಸೊಸೆಯ ಸೀಮಂತ ಕಾರ್ಯಕ್ರಮದ ವೇಳೆ ಅಡುಗೆ ಮಾಡಲು ತಂದಿಟ್ಟಿದ್ದ ಸಿಲಿಂಡರ್ ಸೋರಿಕೆಯಾಗಿ ಬ್ಲಾಸ್ಟ್ ಆಗಿದೆ.

ಲಿಂಡರ್ ಬ್ಲಾಸ್ಟ್ ನಿಂದ ಟೆಂಟ್, ಬೈಕ್ ಹಾಗೂ ಅಕ್ಕಪಕ್ಕದ ಮನೆಗಳಿಗೂ ಬೆಂಕಿ ತಗುಲಿದೆ. 12 ಮಕ್ಕಳು ಸೇರಿ 20 ಜನರು ಗಾಯಗೊಂಡಿದ್ದು, ಗಾಯಗೊಂಡವರನ್ನು ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ.ರಾಗಾಪ್ರಿಯಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೆ ಸಿಲಿಂಡರ್ ಪೂರೈಕೆ ಮಾಡಿದ ಎಜೆನ್ಸಿ ವಿರುದ್ಧ ಕ್ರಮಕೈಗೊಳ್ಳಲು ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!