ಬಜೆಟ್ ಪೂರ್ವಭಾವಿ ಸಭೆ- ಕಂಟ್ರಾಕ್ಟರ್ಸ್ ಅಸೋಸಿಯೇಷನ್’ನಿಂದ ಸಿಎಂಗೆ ಮನವಿ
ಬೆಂಗಳೂರು: ಶನಿವಾರ ವಿಧಾನಸೌಧದಲ್ಲಿ ನಡೆದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ಸ್ ಅಸೋಸಿಯೇಷನ್ ಮನವಿ ಪತ್ರ ಸಲ್ಲಿಸಲಾಯಿತು. ಪ್ಯಾಕೇಜ್ ಪದ್ದತಿ ರದ್ದು, ಬಾಕಿ ಮೊತ್ತ ಬಿಡುಗಡೆ ಮತ್ತು ಜ್ಯೇಷ್ಠತೆ ಪಾಲನೆ ಮತ್ತು ಕೆಆರ್ ಐಡಿಎಲ್ ಮುಚ್ಚುವುದು ಸೇರಿದಂತೆ ಗುತ್ತಿಗೆದಾರರ ಹಲವು ಬೇಡಿಕೆಗಳಿಗೆ ಮುಂಬರುವ ಆಯವ್ಯಯದಲ್ಲಿ ಆದ್ಯತೆ ನೀಡುವಂತೆ ಮನವಿ ಸಲ್ಲಿಸಲಾಯಿತು.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಬಜೆಟ್ ಅಧಿವೇಶನ ನಂತರ ಕೆಎಸ್ ಸಿಎ ಜತೆ ಸಭೆ ನಡೆಸುವುದಾಗಿ ಖಚಿತ ಭರವಸೆ ನೀಡಿದ್ದಾರೆ. ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ಸ್ ಅಸೋಸಿಯೇಷನ್ ಅಧ್ಯಕ್ಷ ಡಿ. ಕೆಂಪಣ್ಣ ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಎಂ.ರವೀಂದ್ರ ಮನವಿ ಪತ್ರ ಸಲ್ಲಿಸಿ ಗುತ್ತಿಗೆದಾರರ ಸಮಸ್ಯೆಗಳನ್ನು ಸಿಎಂ ಗಮನಕ್ಕೆ ತಂದರು.