ಕೋಟ: ಫಿಶ್ ಫ್ಯಾಕ್ಟರಿಯ ಕಾರ್ಮಿಕ ಆತ್ಮಹತ್ಯೆ
ಕೋಟ ಫೆ.28(ಉಡುಪಿ ಟೈಮ್ಸ್ ವರದಿ): ಕೆಲಸಕ್ಕೆಂದು ಹೋಗಿದ್ದ ಫಿಶ್ ಕಟ್ಟಿಂಗ್ ಫ್ಯಾಕ್ಟರಿಯ ಕೆಲಸಗಾರರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸುಲೈಮಾನ್ ಬ್ಯಾರಿ ಆತ್ಮಹತ್ಯೆ ಮಾಡಿಕೊಂಡವರು. ಫಿಶ್ ಕಟ್ಟಿಂಗ್ ಪ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಇವರು ಎಂದಿನಂತೆ ಬೆಳಿಗ್ಗೆ ಕೆಲಸಕ್ಕೆಂದು ಮನೆಯಿಂದ ಹೋದವರು ಮಧ್ಯಾಹ್ನ ಊಟಕ್ಕೆ ಬಾರದೇ ಇದ್ದಾಗ ಮನೆಯವರು ಹುಡುಕಾಡಿದ್ದಾರೆ. ಈ ವೇಳೆ ಸುಲೈಮಾನ್ ಬ್ಯಾರಿಯವರು ಮನೆಯಿಂದ ಸ್ವಲ್ಪ ದೂರದಲ್ಲಿರುವ ಹಳೆಯ ಪಾಳು ಬಿದ್ದ ಕಟ್ಟಡದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.