ನಾಪತ್ತೆಯಾಗಿದ್ದ 16 ವರ್ಷದ ಬಾಲಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ

ಮಂಗಳೂರು, ಮಾ1: ನಗರದಲ್ಲಿ ನಿನ್ನೆ ನಾಪತ್ತೆಯಾಗಿದ್ದ 16 ವರ್ಷದ ಬಾಲಕ ದೃಶ್ಯಾಂತ್ ನ ಮೃತದೇಹ ಹೊಗೈಬಜಾರ್ ಬಳಿ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.

ಖಾಸಗಿ ಪ್ರೌಢಶಾಲೆಯಲ್ಲಿ ಒಂಬತ್ತನೇ ತರಗತಿಯಲ್ಲಿ ಓದುತ್ತಿದ್ದ ದೃಶ್ಯಾಂತ್, ಸಮೀಪದ ಮಹಾಕಾಳಿ ಪಡ್ಪು ಮೈದಾನದಲ್ಲಿ ಬಾನುವಾರ ನಡೆಯುತ್ತಿದ್ದ ಕ್ರಿಕೆಟ್ ಪಂದ್ಯಾಟದಲ್ಲಿ ಮಧ್ಯಾಹ್ನ 3.30ರವರೆಗೆ ಕಾಮೆಂಟರಿ ನಿರ್ವಹಿಸುತ್ತಿದ್ದ. ಆ ಬಳಿಕ ಈತ ತನ್ನ ಸ್ನೇಹಿತರೊಂದಿಗೆ ಮನೆಗೆ ತೆರಳದೆ ನಾಪತ್ತೆಯಾಗಿದ್ದ. ಈ ವೇಳೆ ಆತನ ಸ್ನೇಹಿತರು, ಸಂಬಂಧಿಕರು ಮತ್ತು ಇತರ ಪರಿಚಿತ ವ್ಯಕ್ತಿಗಳೊಂದಿಗೆ ಆತನ ಬಗ್ಗೆ ವಿಚಾರಿಸಲಾಯಿತಾದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಪುತ್ರ ನಾಪತ್ತೆಯಾಗಿರುವ ಬಗ್ಗೆ ತಾಯಿ ಆಶಾ ಅವರು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಭಾನುವಾರ ಎಫ್‍ಐಆರ್ ದಾಖಲಿಸಿದ್ದರು. ಈ ನಡುವೆ ನಿನ್ನೆ ಸಂಜೆ ಹೊಗೆಬಜಾರ್‍ನ ನೇತ್ರಾವತಿ ನದಿಯಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದ್ದು, ಈ ವಿಚಾರವಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!