ಉಡುಪಿ ರೆಡ್‌ಕ್ರಾಸ್: ಕೋವಿಡ್ ಸಂತ್ರಸ್ಥರಿಗೆ ದಿನಸಿ ಕಿಟ್ ವಿತರಣೆ

ಉಡುಪಿ, ಮಾ.02: ಭಾರತೀಯ ರೆಡ್ ಕ್ರಾಸ್ ಸಂಸ್ಥೆಯು ಮಾನವೀಯ ನೆಲೆಯಲ್ಲಿ ಸೇವೆ ಮಾಡುತ್ತಾ ಬಂದಿದ್ದು, ಈಗಾಗಲೇ ರಾಜ್ಯ ಸರಕಾರದ ಕಂದಾಯ ಸಚಿವ ಆರ್ ಆಶೋಕ್ ಅವರು ಕೋವಿಡ್‌ನಿಂದ ನೊಂದ ಮಹಿಳೆಯರಿಗೆ ಹೊಲಿಗೆ ಯಂತ್ರವನ್ನು ವಿತರಿಸಿರುವುದಲ್ಲದೆ ಸಂಸ್ಥೆಯ ವತಿಯಿಂದ ಕೋವಿಡ್‌ನಿಂದ 52 ನೊಂದ ಬಡ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ದಿನಸಿ ಕಿಟ್‌ಗಳನ್ನು ನೀಡಲಾಗಿರುತ್ತದೆ ಎಂದು ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಹೇಳಿದರು.

ಅವರು ಇತ್ತೀಚೆಗೆ ನಗರದ ರೆಡ್‌ಕ್ರಾಸ್ ಭವನದಲ್ಲಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ ಮತ್ತು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಸಹಯೋಗದೊಂದಿಗೆ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಶತಮಾನೋತ್ಸವ ಆಚರಣೆಯ ಅಂಗವಾಗಿ ಕೋವಿಡ್‌ನಿಂದ ನೊಂದ 20 ಬಡ ಫಲಾನುಭವಿಗಳಿಗೆ ರಾಜ್ಯ ಶಾಖೆಯಿಂದ ನೀಡಲ್ಪಟ್ಟ ದಿನಸಿ ಸಾಮಾಗ್ರಿಗಳನ್ನು ವಿತರಿಸಿ ಮಾತನಾಡಿದರು.

ರೆಡ್‌ಕ್ರಾಸ್‌ನ ಅಂಗಸOಸ್ಥೆಯಾದ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ವಿಕಲಚೇತನ ಫಲಾನುಭವಿ ಗಳಿಗೆ ಸಿಗುವ ಸೌಲಭ್ಯ ಹಾಗೂ ಕೃತಕ ಕಾಲು ನೀಡುವಿಕೆ, ತಜ್ಙರಾದ ಆಡಿಯೋಲಿಜಿಸ್ಟ್, ಸೈಕ್ಯಾಟ್ರಿಕ್ ಫಿಸಿಯೋ ಥೆರಪಿಸ್ಟ್ ಸೇವೆಯನ್ನು ಸಾರ್ವಜನಿಕರು ಬಳಸಿಕೊಳ್ಳುವಂತೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಸದಸ್ಯರಾದ ಟಿ. ಚಂದ್ರಶೇಖರ್, ವಿ.ಜಿ. ಶೆಟ್ಟಿ, ರಮಾದೇವಿ, ರೆಡ್‌ಕ್ರಾಸ್ ಸದಸ್ಯ ಬಿ.ರತ್ನಾಕರ್ ಶೆಟ್ಟಿ, ಡಿ.ಡಿ.ಆರ್.ಸಿ ಯೂನಿಟ್ ಇನ್ ಚಾರ್ಜ್ ಜಯಶ್ರೀ, ರೆಡ್ ಕ್ರಾಸ್ ಮತ್ತು ಡಿಡಿಆರ್‌ಸಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!