ಬೈಂದೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಗೆ ಕಾರು ಡಿಕ್ಕಿ- ಓರ್ವ ಸಾವು, ಮೂವರಿಗೆ ಗಾಯ

ಕುಂದಾಪುರ: ಕಿರಿಮಂಜೇಶ್ವರ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ಸಂಜೆ ನಡೆದಿದೆ‌.

ಕಾರು ಡಿವೈಡರ್‌ ಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ಬೆಂಗಳೂರು ಮೂಲದ ಅಕ್ಷಯ್‌ (23) ಸ್ಥಳದಲ್ಲೇ ಮೃತ ಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.

ಬೆಂಗಳೂರಿನಿಂದ ನಾಲ್ವರು ಯುವಕರು ಪ್ರವಾಸಕ್ಕೆಂದು ಇನ್ನೋವಾ ಕಾರಿನಲ್ಲಿ ಉತ್ತರ ಕನ್ನಡ ಜಿಲ್ಲೆಯ ಯಾಣಕ್ಕೆ ಭೇಟಿ ಕೊಟ್ಟು ವಾಪಾಸಾಗುತ್ತಿದ್ದ ಸಂದರ್ಭ ಅವಘಡ ಸಂಭವಿಸಿದೆ.ವೇಗವಾಗಿ ಚಲಿಸುತ್ತಿದ್ದ ಕಾರು ಕಿರಿಮಂಜೇಶ್ವರ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್‌ ಗೆ ಡಿಕ್ಕಿ ಹೊಡೆದು ರಸ್ತೆಯ ಇನ್ನೊಂದು ಮಗ್ಗುಲಿಗೆ ಹೋಗಿ ಪಲ್ಟಿಯಾಗಿದೆ. ಈ ವೇಳೆ ಕಾರಿನಲ್ಲಿದ್ದ ಅಕ್ಷಯ್‌ ಸ್ಥಳದಲ್ಲೇ ಮೃತಪಟ್ಟಿದ್ದು, ಇತರ 3 ಪ್ರಯಾಣಿಕರಾದ ತೇಜಸ್‌, ಪವನ್‌ ಮತ್ತು ಹರ್ಷ ಗಂಭೀರ ಗಾಯಗಳೊಂದಿಗೆ ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!