ಬಿಎಸ್‌ಎಫ್ ಜವಾನನಿಂದ ಸಹೋದ್ಯೋಗಿಗಳ ಮೇಲೆ ಗುಂಡಿನ ದಾಳಿ- 5 ಸೈನಿಕರು ಸಾವು

ಅಮೃತಸರ: ಪಂಜಾಬ್‌ನ ಅಮೃತಸರದ ಫೋರ್ಸ್ ಕ್ಯಾಂಪ್‌ನಲ್ಲಿ ಭಾನುವಾರ ಬಿಎಸ್ಎಫ್ ಜವಾನ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ್ದು, ಘಟನೆಯಲ್ಲಿ ಕನಿಷ್ಠ ಐವರು ಗಡಿ ಭದ್ರತಾ ಪಡೆ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ ಅಟ್ಟಾರಿ-ವಾಘಾ ಗಡಿ ದಾಟುವಿಕೆಯಿಂದ ಸುಮಾರು 20 ಕಿಮೀ ದೂರದಲ್ಲಿರುವ ಖಾಸಾ ಪ್ರದೇಶದ ಫೋರ್ಸ್ ಮೆಸ್‌ನಲ್ಲಿ ಈ ಘಟನೆ ನಡೆದಿದೆ. ಗುಂಡಿನ ದಾಳಿ ನಡೆಸಿದ ಜವಾನ ಸೇರಿದಂತೆ ಐವರು ಯೋಧರ ಮೃತಪಟ್ಟಿದ್ದಾರೆ. ದಾಳಿಯಲ್ಲಿ ಓರ್ವ ಯೋಧ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಡಿ ಭದ್ರತಾ ಪಡೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!