ಮಹಿಳಾ ವಿಶ್ವಕಪ್- ಭಾರತ ತಂಡದ ನಾಯಕಿ ಮಿಥಾಲಿ ರಾಜ್ ಹೊಸ ದಾಖಲೆ
March 12, 2022
ಹೊಸದಿಲ್ಲಿ ಮಾ.12:ಮಹಿಳಾ ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ಹೆಚ್ಚು ಪಂದ್ಯದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುವ ಮೂಲಕ ಭಾರತ ತಂಡದ ನಾಯಕಿ ಮಿಥಾಲಿ ರಾಜ್ ದಾಖಲೆ ನಿರ್ಮಿಸಿದ್ದಾರೆ.
ಹ್ಯಾಮಿಲ್ಟನ್‌ನ ಸೆಡನ್ ಪಾರ್ಕ್‌ನಲ್ಲಿ ನಡೆಯುತ್ತಿರುವ ಮಹಿಳಾ ವಿಶ್ವಕಪ್‌ನಲ್ಲಿ ಭಾರತ ತಂಡದ ನಾಯಕಿ ಮಿಥಾಲಿ ರಾಜ್ ಅವರು ಪಂದ್ಯಾವಳಿಯ ಮೂರನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ಬ್ಯಾಟಿಂಗ್ ಆಯ್ಕೆ ಮಾಡುವುದರೊಂದಿಗೆ ಮಹಿಳಾ ವಿಶ್ವಕಪ್ ಇತಿಹಾಸದಲ್ಲಿ ಅತ್ಯಂತ ಹೆಚ್ಚು ಪಂದ್ಯದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.ಮಿಥಾಲಿ ಅವರು 23 ಪಂದ್ಯಗಳಲ್ಲಿ ತಮ್ಮ ತಂಡವನ್ನು ಮುನ್ನಡೆಸಿ ದ್ದಆಸ್ಟ್ರೇಲಿಯ ಮಹಿಳಾ ತಂಡದ ಮಾಜಿ ನಾಯಕಿ ಬೆಲಿಂಡಾ ಕ್ಲಾರ್ಕ್ ಅವರನ್ನು ಹಿಂದಿಕ್ಕಿದರು. ಶನಿವಾರ ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದೊಂದಿಗೆ ಮಿಥಾಲಿ ವಿಶ್ವಕಪ್‌ನಲ್ಲಿ 24 ನೇ ಬಾರಿಗೆ ಭಾರತವನ್ನು ನಾಯಕಿಯಾಗಿ ಮುನ್ನಡೆಸುತ್ತಿದ್ದಾರೆ.
ಭಾರತ ಇದುವರೆಗೆ ನಡೆಯುತ್ತಿರುವ ಪಂದ್ಯಾವಳಿಯಲ್ಲಿ ಒಂದು ಪಂದ್ಯದಲ್ಲಿ ಸೋಲನುಭವಿಸಿ, ಮತ್ತೊಂದು ಪಂದ್ಯವನ್ನು ಗೆದ್ದುಕೊಂಡಿದೆ. ಭಾರತವು ತನ್ನ ಟೂರ್ನಮೆಂಟ್ ನ ಆರಂಭಿಕ ಪಂದ್ಯದಲ್ಲಿ ಪಾಕಿಸ್ತಾನವನ್ನು ಸೋಲಿಸಿತು. ಆದರೆ ತನ್ನ 2ನೇ ಪಂದ್ಯದಲ್ಲಿ ನ್ಯೂಝಿಲ್ಯಾಂಡ್ ವಿರುದ್ಧ, 62 ರನ್‌ಗಳಿಂದ ಭಾರೀ ಸೋಲನ್ನು ಅನುಭವಿಸಿತು, ಇದೀಗ ವೆಸ್ಟ್ ಇಂಡೀಸ್ ವಿರುದ್ಧದ ಗೆಲುವಿನೊಂದಿಗೆ ಮಿಥಾಲಿ ದಾಖಲೆ ಬರೆಯುವ ನಿರೀಕ್ಷೆಯಲ್ಲಿದ್ದಾರೆ.