ಕೆನಡಾ: ಭೀಕರ ರಸ್ತೆ ಅಪಘಾತ- ಐವರು ಭಾರತೀಯರ ಸಾವು

ಒಟ್ಟಾವಾ ಮಾ.14: ಕೆನಡಾದ ಒಂಟಾರಿಯೊ ಹೆದ್ದಾರಿಯಲ್ಲಿ ಆಟೋ ಮತ್ತು ಟ್ರ್ಯಾಕ್ಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ಭಾರತೀಯ ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿದ್ದಾರೆ.

ಹರ್ ಪ್ರೀತ್ ಸಿಂಗ್, ಜಸ್ಪಿಂದರ್ ಸಿಂಗ್, ಕರಣ್ ಪಾಲ್ ಸಿಂಗ್, ಮೋಹಿತ್ ಚೌಹಾನ್ ಮತ್ತು ಪವನ್ ಕುಮಾರ್ ಮೃತ ಭಾರತೀಯ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಕೆನಡಾದ ಟೊರೊಂಟೊ ಬಳಿ ಆಟೋವೊಂದು ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ ಪರಿಣಾಮ ಐವರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತದ ಕುರಿತು ತನಿಖೆ ನಡೆಯುತ್ತಿದೆ ಎಂದು ಕ್ವಿಂಟೆ ವೆಸ್ಟ್ ಒಂಟಾರಿಯೊ ಪ್ರಾಂತೀಯ ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಕೆನಡಾದಲ್ಲಿನ ಭಾರತೀಯ ಹೈಕಮಿಷನರ್ ಅಜಯ್ ಬಿಸಾರಿಯಾ ಅವರು, ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಹಾಗೂ ಸಹಾಯಕ್ಕಾಗಿ ಸಂತ್ರಸ್ತರ ಸ್ನೇಹಿತರೊಂದಿಗೆ ಭಾರತೀಯ ರಾಯಭಾರಿ ತಂಡವು ಸಂಪರ್ಕದಲ್ಲಿದೆ. ಹಾಗೂ ಸಂತ್ರಸ್ತರ ಸ್ನೇಹಿತರಿಗೆ ಸಾಧ್ಯವಿರುವ ಎಲ್ಲಾ ಸಹಾಯವನ್ನು ನೀಡುತ್ತಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!