ಉಡುಪಿ: ಆಗಸ್ಟ್ 4ವರೆಗೆ ಭಾರಿ ಮಳೆ, ಹವಾಮಾನ ಇಲಾಖೆ ಎಚ್ಚರಿಕೆ

ಉಡುಪಿ: ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 4 ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆಯೆಂದು ಎಚ್ಚರಿಸಿದ್ದಾರೆ.


ಪ್ರಸ್ತುತ ಉಡುಪಿ ಜಿಲ್ಲೆಗೆ (ಶುಕ್ರವಾರ ಮಧ್ಯಾಹ್ನದ ವರದಿಯಂತೆ) ಮುಂದಿನ 4 ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸುಮಾರು 115mm ಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿರುತ್ತದೆ, ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಸೂಚನೆಗಳನ್ನು ನೀಡಿದೆ.


ಜಿಲ್ಲಾ/ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ನಾನದಲ್ಲಿ ಇರತಕ್ಕದ್ದು. ಸಾರ್ವಜನಿಕರು ನದಿ/ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವುದು. ಇಂತಹ ಸಂದರ್ಭದಲ್ಲಿ ಮಕ್ಕಳು/ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ/ಕಟ್ಟಡ/ಮರಗಳ ಕೆಳಗೆ ನಿಲ್ಲದ ಸುರಕ್ಷಿತ ಸಾಲಗಳನ್ನು ತಲುಪುವದು.

Leave a Reply

Your email address will not be published. Required fields are marked *

error: Content is protected !!