ಹಿಜಾಬ್ ವಿವಾದ: ಸಂಘಟನೆಗಳ ವಿರುದ್ಧ ಎನ್‌ಐಎ ತನಿಖೆಗೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು ಮಾ.16: ಹಿಜಾಬ್ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಸಂಘಟನೆಗಳ ವಿರುದ್ಧ ಎನ್‌ಐಎ ಅಥವಾ ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.
ಹಿಜಾಬ್ ವಿವಾದ ಭುಗಿಲೇಳಲು ಪಿಎಫ್‌ಐ, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ, ಸ್ಪೂಡೆಂಟ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ, ಜಮಾತೇ ಇಸ್ಲಾಮಿ ಹಿಂದ್ ಮುಂತಾದ ಸಂಘಟನೆಗಳೇ ಕಾರಣ. ಅವುಗಳಿಗೆ ಭಾರತವನ್ನು ಇಸ್ಲಾಮೀಕರಣಗೊಳಿಸಲು ವಿದೇಶಿ ವಿಶ್ವವಿದ್ಯಾನಿಲಯಗಳು ಮತ್ತು ಅಂತಾರಾಷ್ಟ್ರೀಯ ಮಟ್ಟದ ಸಂಸ್ಥೆಗಳು ಆರ್ಥಿಕ ನೆರವು ನೀಡುತ್ತಿವೆ ಎಂದು ಆರೋಪಿಸಿ, ಈ ವಿಚಾರವಾಗಿ ಸಂಘಟನೆಗಳ ವಿರುದ್ಧ ಎನ್‌ಐಎ ಅಥವಾ ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಇದೀಗ ಈ ಅರ್ಜಿಗಳ ವಿಚಾರವಾಗಿ ಪ್ರತಿಕ್ರಯಿಸಿರು ಹೈಕೋರ್ಟ್ ಅರ್ಜಿಯಲ್ಲಿ ಯಾವುದೇ ಮೆರಿಟ್ ಇಲ್ಲ, ಹಾಗಾಗಿ ಪುರಸ್ಕರಿಸಲು ಸಾಧ್ಯವಿಲ್ಲ ಎಂದು ಹೇಳಿ ಅರ್ಜಿಗಳನ್ನು ವಜಾ ಗೊಳಿಸಿದೆ ಎಂದು ತಿಳಿದು ಬಂದಿದೆ.