133 ಜನ ಪ್ರಯಾಣಿಸುತ್ತಿದ್ದ ವಿಮಾನ ಪತನ

ಬೀಜಿಂಗ್ ಮಾ.21: ನೈಋತ್ಯ ಚೀನಾದಲ್ಲಿ 133 ಜನರನ್ನು ಹೊತ್ತೊಯ್ಯುತ್ತಿದ್ದ ಚೀನಾ ಈಸ್ಟರ್ನ್ ಪ್ಯಾಸೆಂಜರ್ ಜೆಟ್  ಪತನಗೊಂಡಿದೆ ಎಂಬ ಸುದ್ದಿ ವರದಿಯಾಗಿದೆ.

ಚೀನಾದ ಗುವಾಂಗ್ಕ್ಸಿ ಪ್ರದೇಶದ ವುಝೌ ನಗರದ ಸಮೀಪವಿರುವ ಗ್ರಾಮಾಂತರ ಪ್ರದೇಶದಲ್ಲಿ ಬೋಯಿಂಗ್ 737 ವಿಮಾನವು ಪತನ ಗೊಂಡಿದೆ. ಘಟನೆಯಲ್ಲಿ ಉಂಟಾಗಿರಬಹುದಾದ ಸಾವು ನೋವಿನ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. “ಪರ್ವತದಲ್ಲಿ  ಬೆಂಕಿ ಕಾಣಿಸಿಕೊಂಡಿದ್ದು, ರಕ್ಷಣಾ ತಂಡಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಗಿದೆ ಎಂದು  ವರದಿಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!