ಉ.ಪ್ರದೇಶದಲ್ಲಿ ಹೀನಾಯ ಸೋಲು: ಪ್ರಿಯಾಂಕಾ ವಾದ್ರಾ ರಾಜಿನಾಮೆಗೆ ಕಾಂಗ್ರೆಸ್ ಒತ್ತಾಯ

ಲಖನೌ: ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ಉತ್ತರ ಪ್ರದೇಶ ಕಾಂಗ್ರೆಸ್‌ನಲ್ಲಿ ಆಂತರಿಕ ಕಲಹ ಮುಂದುವರಿದಿದ್ದು, ಇದೀಗ ಪಕ್ಷದ ಉಸ್ತುವಾರಿ ಪ್ರಿಯಾಂಕಾ ಗಾಂಧಿ ವಾದ್ರಾ ರಾಜೀನಾಮೆಗೆ ರಾಜ್ಯ ನಾಯಕರು ಒತ್ತಾಯಿಸಿದ್ದಾರೆ.

ರಾಜ್ಯ ಘಟಕದಿಂದ ಉಚ್ಛಾಟಿತರಾಗಿರುವ ಎಐಸಿಸಿ ಸದಸ್ಯ ಜೀಶನ್ ಹೈದರ್ ಅವರು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ಯುಪಿ ಸೋಲಿನ ನಂತರ ಸಂಪ್ರದಾಯದಂತೆ ಪ್ರಿಯಾಂಕಾ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ಮಂಗಳವಾರ ಇಲ್ಲಿ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ ಪತ್ರದಲ್ಲಿ ಹೈದರ್, 2012ರ ವಿಧಾನಸಭೆ ಚುನಾವಣೆ ಸೋಲಿನ ನಂತರ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಮತ್ತು ರಾಜ್ಯಾಧ್ಯಕ್ಷರಾಗಿ ರೀಟಾ ಬಹುಗುಣ ಜೋಶಿ ಮತ್ತು ರಾಜ್ಯ ಉಸ್ತುವಾರಿ ಗುಲಾಂ ನಬಿ ಆಜಾದ್ ಮತ್ತು ರಾಜ್ ಬಬ್ಬರ್ ರಾಜೀನಾಮೆ ನೀಡಿದ್ದಾರೆ. ಆದರೆ ಪಕ್ಷದ ಸೋಲಿನ ನಂತರ ಪ್ರಿಯಾಂಕಾ ಇನ್ನೂ ಏಕೆ ತಮ್ಮ ಹುದ್ದೆಯಲ್ಲಿ ಮುಂದುವರಿದಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಈಗಾಗಲೇ ರಾಜ್ಯಾಧ್ಯಕ್ಷ ಅಜಯ್ ಕುಮಾರ್ ಲಲ್ಲು ರಾಜೀನಾಮೆ ನೀಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಸುಮಾರು 400 ಸ್ಥಾನಗಳಲ್ಲಿ ಸ್ಪರ್ಧಿಸಿದ ಕಾಂಗ್ರೆಸ್ ಕೇವಲ 2 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ ಅಭ್ಯರ್ಥಿಗಳು 387 ಸ್ಥಾನಗಳಲ್ಲಿ ಠೇವಣಿ ಕಳೆದುಕೊಂಡಿದ್ದಾರೆ, ಇದು ರಾಜ್ಯ ಉಸ್ತುವಾರಿ ಮತ್ತು ಅವರ ತಂಡದ ಸದಸ್ಯರ ಸಾಮರ್ಥ್ಯವನ್ನು ಸಾಬೀತುಪಡಿಸುತ್ತದೆ ಎಂದು ಅವರು ಆರೋಪಿಸಿದರು.

ಪಕ್ಷದ ಅಧ್ಯಕ್ಷರು ಐದು ರಾಜ್ಯಗಳ ರಾಜ್ಯಾಧ್ಯಕ್ಷರ ರಾಜೀನಾಮೆಯನ್ನು ಕೇಳಬಹುದಾದಾಗ, ಈ ಸೋಲಿಗೆ ಸಂಪೂರ್ಣ ಹೊಣೆಗಾರರಾದ ರಾಜ್ಯ ಉಸ್ತುವಾರಿಗಳ ವಿಷಯದಲ್ಲಿ ಅವರು ಏಕೆ ರಾಜೀನಾಮೆ ನೀಡಲಿಲ್ಲ ಎಂದು ಹೈದರ್ ಪ್ರಶ್ನಿಸಿದರು. ಪ್ರಿಯಾಂಕಾ ಗಾಂಧಿ ವಾದ್ರಾ ಅವರ ತಂಡದ ವಿರುದ್ಧ ವಾಗ್ದಾಳಿ ನಡೆಸಿ ಸೋಲಿಗೆ ಅವರೇ ಕಾರಣ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!