| ಉಡುಪಿಮಾ.23: ಜಾತ್ರೆ ಮಹೋತ್ಸವಗಳಲ್ಲಿ ಮುಸ್ಲಿಮ್ ವ್ಯಾಪಾರಿಗಳಿಗೆ ಬಹಿಷ್ಕಾರ ಹಾಕಿರುವುದು ಚುನಾವಣಾ ಷಡ್ಯಂತ್ರ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಆರೋಪಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ಸೌಹಾರ್ದಯುತ ಕಾಪುವಿನಲ್ಲಿ ಈವರೆಗೆ ಇಂತಹ ಯಾವುದೇ ಸಮಸ್ಯೆಗಳು ಇರಲಿಲ್ಲ. ಈವರೆಗೆ ಎಲ್ಲರೂ ಜಾತಿ ಮತ ಬೇಧವಿಲ್ಲದೆ ವ್ಯವಹಾರಗಳನ್ನು ನಡೆಸುತ್ತಿದ್ದರು ಎಂದರು. ಇಲ್ಲಿ ವ್ಯವಹಾರ ನಡೆಸಲು ನಿರ್ಬಂಧಿಸುವುದು ಸರಿಯಾದ ಕ್ರಮವಲ್ಲ ಎಂದ ಅವರು, ನಾನು ಸಚಿವನಾಗಿದ್ದ ಸಂದರ್ಭದಲ್ಲಿ ಓರ್ವ ಹಿಂದೂ ಕಾಪು ಮಾರಿ ಗುಡಿಯಲ್ಲಿ ನಡೆಯುವ ಮಾರಿಪೂಜೆಗೆ ಅವಕಾಶ ನೀಡಬಾರದು ಎಂದು ನ್ಯಾಯಾಲಯದ ಮೆಟ್ಟಿಲೇರಿದ್ದರು. ಅದನ್ನು ನಾವೆಲ್ಲ ಸೌಹಾರ್ದಯುತವಾಗಿ ಪರಿಹರಿಸಿದ್ದೇವೆ. ಜಾತ್ಯಾತೀತ ರಾಷ್ಟ್ರದಲ್ಲಿ ಎಲ್ಲರೂ ಸಮಾನರು. ಇದೊಂದು ಚುನಾವಣಾ ಷಡ್ಯಂತ್ರ ಎಂದು ಅವರು ಹೇಳಿದ್ದಾರೆ
| |