ಹಿಜಾಬ್ ವಿವಾದ ಇತ್ಯರ್ಥಕ್ಕೆ ಕಾಂಗ್ರೆಸ್ ನಮಗೆ ಬೆಂಬಲ ನೀಡಿತ್ತು- ಸಿಎಫ್’ಐ ವಿವಾದವನ್ನು ಮತ್ತಷ್ಟು ಹೆಚ್ಚಿಸಿತು: ರಘುಪತಿ ಭಟ್
ಬೆಂಗಳೂರು, ಮಾ.23: ಸಿಎಫ್ ಐ ಕುಮ್ಮಕ್ಕಿನಿಂದ ಹಿಜಾಬ್ ವಿವಾದ ಆರಂಭವಾಗಿದೆ ಎಂದು ಶಾಸಕ ರಘುಪತಿ ಭಟ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಖಾದರ್ ಪ್ರಸ್ತಾಪಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ರಘುಪತಿ ಭಟ್ ಪ್ರತಿಕ್ರಿಯೆ ನೀಡಿದ್ದಾರೆ. ಉಡುಪಿಯಲ್ಲಿ ಹಿಜಾಬ್ ವಿವಾದ ಆರಂಭವಾದ ಸಂದರ್ಭದಲ್ಲಿ ಅದನ್ನು ಬಗೆಹರಿಸಲು ನಾವು ಪ್ರಯತ್ನಿಸಿದ್ದೇವೆ.
ಉಡುಪಿಯಲ್ಲಿ ಸಿಎಫ್ ಐ ಹಿಜಾಬ್ ವಿವಾದ ಹುಟ್ಟುಹಾಕಿತ್ತು. ಆ ಸಂದರ್ಭ ಪ್ರಕರಣ ಇತ್ಯರ್ಥಗೊಳಿಸಲು ಪ್ರಯತ್ನಿಸಿದ್ದೇವೆ. ಕಾಂಗ್ರೆಸ್ ನವರೂ ಕೂಡ ನಮಗೆ ಬೆಂಬಲ ನೀಡಿದ್ದಾರೆ. ಆದರೆ, ಸಿಎಫ್ ಐ ಸಂಘಟನೆ ವಿವಾದವನ್ನು ಮತ್ತಷ್ಟು ಹೆಚ್ಚಿಸಿತು. ಆ ಬಳಿಕ ಉಡುಪಿಯಿಂದ ಕುಂದಾಪುರಕ್ಕೂ ವಿವಾದ ವಿಸ್ತರಿಸಿದರು ಎಂದು ಸದನದಲ್ಲಿ ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.