ಶಿವಮೊಗ್ಗ: ಹರ್ಷ ಹತ್ಯೆ ಪ್ರಕರಣ ರಾಷ್ಟ್ರೀಯ ತನಿಖಾ ದಳ(NIA) ತನಿಖೆಗೆ

ಉಡುಪಿ: ಕೇಂದ್ರ ಸಚಿವರಾದ ಕು. ಶೋಭಾ ಕರಂದ್ಲಾಜೆಯವರ ಮನವಿಯ ಮೇರೆಗೆ ಗೃಹ ಇಲಾಖೆಯು ಶಿವಮೊಗ್ಗದ ಹರ್ಷ ಪ್ರಕರಣವನ್ನು NIA (ರಾಷ್ಟ್ರೀಯ ತನಿಖಾ ದಳ) ತನಿಖೆಗೆ ವಹಿಸಿದೆ. ಈಗಾಗಲೇ ರಾಷ್ಟ್ರೀಯ ತನಿಖಾ ದಳ, ಈ ಪ್ರಕರಣದ ಕುರಿತು ಎಫ್ ಐಆರ್ ದಾಖಲಿಸಿಕೊಂಡಿದ್ದು, ತನಿಖೆಯನ್ನು ನಡೆಸಲಿದೆ.

ಬಜರಂಗ ದಳ ಕಾರ್ಯಕರ್ತ  ಹರ್ಷ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದು, ಇವರಲ್ಲಿ ಹಲವರು ಕ್ರಿಮಿನಲ್ ಹಿನ್ನೆಲೆ ಹೊಂದಿದ್ದಾರೆ. ವ್ಯವಸ್ಥಿತ ಸಂಚಿನ ಮೂಲಕ ಹರ್ಷನ ಕೊಲೆಗೈದಿರುವುದು ತನಿಖೆಯಿಂದ ಬೆಳಕಿಗೆ ಬಂದಿತ್ತು.

Leave a Reply

Your email address will not be published. Required fields are marked *

error: Content is protected !!