ಪಠ್ಯದಲ್ಲಿ ಭಗವದ್ಗೀತೆ ಅಳವಡಿಸುವುದರಲ್ಲಿ ತಪ್ಪೇನಿದೆ.?- ಡಿ.ಕೆ.ಶಿವಕುಮಾರ್
ಕೊಪ್ಪಳ ಮಾ.25: ಭಗವದ್ಗೀತೆ ನಮ್ಮ ದೇಶದ ಅಸ್ಮೀತೆ, ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆಯನ್ನು ಕಾಂಗ್ರೆಸ್ ಸ್ವಾಗತಿಸುತ್ತದೆ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ ಬಗ್ಗೆ ಕೊಪ್ಪಳದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ದೇಶದ ಎಲ್ಲಾ ಧರ್ಮವನ್ನ ಕಾಂಗ್ರೆಸ್ ಗೌರವಿಸಿತ್ತದೆ ಎಂದು ನಮ್ಮ ದೇಶದ ಧರ್ಮ ಗ್ರಂಥವನ್ನು ಪಠ್ಯದಲ್ಲಿ ಅಳವಡಿಸುವುದರಲ್ಲಿ ತಪ್ಪೇನಿದೆ.? ಎಂದು ಪ್ರಶ್ನಿಸಿದ್ದಾರೆ. ಹಾಗೂ ಇದೇ ವೇಳೆ ಅವರು, ಇಡೀ ದೇಶಕ್ಕೆ ರಾಮಾಯಣ, ಮಹಾಭಾರತ ಪರಿಚಯ ಮಾಡಿಕೊಟ್ಟಿದ್ದೆ ಕಾಂಗ್ರೆಸ್. ದೂರದರ್ಶನದ ಮೂಲಕ ಭಗವದ್ಗೀತೆಯನ್ನು ಪ್ರಚಾರ ಮಾಡಿದ್ದು ನಮ್ಮ ಪಕ್ಷ ಎಂದಿದ್ದಾರೆ.