ಉಡುಪಿ: ಎ.ಸಿ.ಬಿ ಯಿಂದ ಅಹವಾಲು ಸ್ವೀಕಾರ

ಉಡುಪಿ, ಮಾ.25: ಉಡುಪಿ ಭ್ರಷ್ಟಾಚಾರ ನಿಗ್ರಹ ದಳ ಪೋಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಮಾ. 29 ರಂದು ಕುಂದಾಪುರ ಪ್ರವಾಸಿ ಮಂದಿರ ಮತ್ತು ಮಾ. 30 ರಂದು ಕಾರ್ಕಳ ಪ್ರವಾಸಿ ಮಂದಿರದಲ್ಲಿ ಬೆಳಗ್ಗೆ 11 ರಿಂದ ಸಂಜೆ 4.30 ರ ವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಸಾರ್ವಜನಿಕ ನೌಕರ ತನ್ನ ದಿನನಿತ್ಯದ ಕೆಲಸಗಳನ್ನು ನಿರ್ವಹಿಸಲು ಅನಗತ್ಯ ವಿಳಂಬ ಮಾಡಿದಲ್ಲಿ, ನಿರ್ಲಕ್ಯ ತೋರಿದಲ್ಲಿ ಅಥವಾ ಲಂಚ ಕೇಳಿದಲ್ಲಿ ದೂರು ಸ್ವೀಕರಿಸಲಾಗುವುದು ಎಂದು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಉಪಾಧೀಕ್ಷಕರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!