ಆರ್ಯನ್ ಖಾನ್ ಡ್ರಗ್ಸ್ ಪಾರ್ಟಿ ಪ್ರಕರಣ: ಪ್ರಮುಖ ಸಾಕ್ಷಿ ಪ್ರಭಾಕರ್ ಸೈಲ್ ಸಾವು

ಮುಂಬೈ, ಎ.2: ರಾಷ್ಟ್ರದಾದ್ಯಂತ ಸಂಚಲನ ಸೃಷ್ಟಿಸಿದ್ದ ಕಾರ್ಡೆಲಿಯಾ ಕ್ರೂಸ್ ಡ್ರಗ್ ಪ್ರಕರಣದಲ್ಲಿ ಎನ್‌ಸಿಬಿಯ ಪ್ರಮುಖ ಸಾಕ್ಷಿಯಾಗಿದ್ದ ಪ್ರಭಾಕರ್ ಸೈಲ್ ನಿನ್ನೆ ಸಂಜೆ ಚೆಂಬೂರಿನ ಮಹುಲ್‌ನಲ್ಲಿರುವ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 

ಪ್ರಭಾಕರ್ ಸೈಲ್ ಅವರ ಮೃತದೇಹವನ್ನು ಶನಿವಾರ ಬೆಳಗ್ಗೆ ಗಂಟೆಗೆ ಅಂಧೇರಿಯಲ್ಲಿರುವ ಅವರ ಮನೆಗೆ ತಂದು ಅಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ತಿಳಿದುಬಂದಿದೆ. 2021ರ ಅಕ್ಟೋಬರ್ 3ರಂದು ಐಷಾರಾಮಿ ಹಡಗಿನ ಮೇಲೆ ದಾಳಿ ನಡೆಸಿದ್ದ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (ಎನ್‌ಸಿಬಿ) ತನಿಖಾಧಿಕಾರಿಗಳು ಡ್ರಗ್ಸ್ ಪಾರ್ಟಿ ನಡೆಸುತ್ತಿದ್ದ ಆರೋಪದಲ್ಲಿ ಬಾಲಿವುಡ್ ನಟ ಶಾರುಕ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ ಸುಮಾರು 20 ಜನರನ್ನು ಬಂಧಿಸಿದ್ದರು. ಪ್ರಕರಣದ ವೇಳೆ ಪ್ರಭಾಕರ್​ ಸೈಲ್​ ಕೂಡಾ ಬೆಳಕಿಗೆ ಬಂದಿದ್ದು, ಪ್ರಭಾಕರ್ ಸೈಲ್ ಅವರು ಡ್ರಗ್ಸ್‌ ಪ್ರಕರಣದ ಮತ್ತೊಬ್ಬ ಪ್ರಮುಖ ಸಾಕ್ಷಿ ಕೆ.ಪಿ.ಗೋಸಾವಿ ಅವರ ಅಂಗರಕ್ಷಕನಾಗಿದ್ದ. 

Leave a Reply

Your email address will not be published. Required fields are marked *

error: Content is protected !!