| ಬೈಂದೂರು ಎ.10 (ಉಡುಪಿ ಟೈಮ್ಸ್ ವರದಿ): ತಾಲೂಕಿನ ಯಡ್ತರೆ ಗ್ರಾಮದ ನಿವಾಸಿ ಆಶಾ ಎಂಬವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಯಡ್ತರೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಆಶಾ (30) ಅವರು ಟೈಲರಿಂಗ್ ಕೆಲಸ ಮಾಡಿಕೊಂಡಿದ್ದರು. ಇಂದು ಬೆಳಿಗ್ಗೆ ತಮ್ಮ ಪತಿ ಕೃಷ್ಣಯ್ಯ ಆಚಾರ್ಯ ಅವರು ಕೆಲಸಕ್ಕೆ ಹೋಗಿದ್ದ ವೇಳೆ ಆಶಾ ಅವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಯಾವುದೋ ವಿಷಯಕ್ಕೆ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರು ವುದಾಗಿ ಮೃತರ ತಮ್ಮ ನೀಡಿದ ಮಾಹಿತಿ ಯಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ… ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು
| |