ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಆತ್ಮಹತ್ಯೆ- ಸಿಎಂ ಸಭೆ ನಡೆಸುತ್ತಿದ್ದ ಹೋಟೆಲ್ ಗೆ ಮುತ್ತಿಗೆ ಹಾಕಲು ಯತ್ನ

ಮಂಗಳೂರು‌ ಎ.12: ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ  ಸಚಿವ ಈಶ್ವರಪ್ಪ ಅವರನ್ನು ಸಂಪುಟದಿಂದ ಕೈಬಿಡಬೇಕು ಹಾಗೂ ಅವರನ್ನು ಬಂಧಿಸಿ ಕಾನೂನು ಕ್ರಮ ಜರಗಿಸಬೇಕು ಎಂದು ಒತ್ತಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಭೆ ನಡೆಸುತ್ತಿದ್ದ ಹೋಟೆಲ್ ಗೆ ಮುತ್ತಿಗೆ ಹಾಕಲು ಯತ್ನಿಸಿರುವ ಘಟನೆ ಇಂದು ಸಂಜೆ ನಡೆದಿದೆ.

ಈಶ್ವರಪ್ಪ ವಿರುದ್ದ ಕಮಿಷನ್ ಆರೋಪ ಮಾಡಿದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಂಗಳೂರಿನ ಖಾಸಗಿ ಹೋಟೆಲ್ ವೊಂದರಲ್ಲಿ  ಸಭೆ ನಡೆಸುತ್ತಿದ್ದರು. ಈ ವೇಳೆ ಸಭೆ ನಡೆಸುತ್ತಿದ್ದ  ಖಾಸಗಿ ಹೊಟೇಲ್‌ಗೆ ಕಾಂಗ್ರೆಸ್ ಕಾರ್ಯಕರ್ತರು ಏಕಾಏಕಿ ನುಗ್ಗಲು ಯತ್ನಿಸಿದರು. ಇದರಿಂದ ಪೊಲೀಸರು ಕೆಲಕಾಲ ಗೊಂದಲಕ್ಕೊಳಗಾಗಿದ್ದರು. ಬಳಿಕ ತಕ್ಷಣ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಹೊಟೇಲ್ ಬಾಗಿಲಿನಿಂದ ರಸ್ತೆಯತ್ತ ತಳ್ಳಿಕೊಂಡು ಬಂದಿದ್ದು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ ಸಹಿತ ಹಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!