ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಉಡುಪಿ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿದ ಜಿಲ್ಲಾಡಳಿತ

 

ಉಡುಪಿ. ಎ.13 (ಉಡುಪಿ ಟೈಮ್ಸ್ ವರದಿ) : ಗಂಗೊಳ್ಳಿಯಲ್ಲಿ ಎ.15 ರಂದು ನಡೆಯಲಿರುವ ವೀರೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆಯ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಉಡುಪಿ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ಹೇರಲಾಗಿದೆ. 

 ಈ ಬಗ್ಗೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಅವರು ಆದೇಶ ಹೊರಡಿಸಿದ್ದು, ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಎ.15 ರಂದು ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಅವರ  ಆಗಮನದ ಪ್ರವೇಶವನ್ನು ಉಡುಪಿ ಜಿಲ್ಲಾದ್ಯಂತ ನಿಭರ್ಂಧಿಸಿ  ಸಿ.ಆರ್.ಪಿ.ಸಿ ಸೆಕ್ಷನ್ 133, 143 ಮತ್ತು 144  ರನ್ವಯ  ನಿಷೇದಾಜ್ಞೆಯನ್ನು ವಿಧಿಸಿ ಆದೇಶಿಸಿದದ್ದಾರೆ.

1 thought on “ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಉಡುಪಿ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿದ ಜಿಲ್ಲಾಡಳಿತ

Leave a Reply

Your email address will not be published. Required fields are marked *

error: Content is protected !!