ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಕೊರೊನಾ ಸೋಂಕು ದೃಢ

ಬೆಂಗಳೂರು : ಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢವಾದ ಬೆನ್ನಲ್ಲೇ ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ.


ಮೂತ್ರ ಕೋಶದ ಸೋಂಕಿನಿಂದ ಮಾಜಿ ಸಿಎಂ ಸಿದ್ದರಾಮಯ್ಯಗೆ ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ನಿನ್ನೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸಂದರ್ಭದಲ್ಲಿ ಅವರಿಗೆ ಕೋವಿಡ್ ಟೆಸ್ಟ್ ಕೂಡ ಮಾಡಲಾಗಿತ್ತು. ಇದೀಗ ವರದಿ ಬಂದಿದ್ದು ಅದರಲ್ಲಿ ಕೊರೊನಾ ಇರೋದು ದೃಢವಾಗಿದೆ. ಈ ಬಗ್ಗೆ ಸಿದ್ದರಾಮಯ್ಯ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!